ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಇಂದು ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಧ್ಯಾಹ್ನ 3 ಗಂಟೆಗೆ ಫಲಿತಾಂಶವನ್ನು ಬಿಡುಗಡೆ ಮಾಡಲಿದ್ದು, ಮಂಡಳಿಯ ವೆಬ್ಸೈಟ್ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು.
ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಆದ್ರೆ, ಮೊದಲ ಹಂತದಲ್ಲಿ ಅನುತ್ತೀರ್ಣರಾಗಿ ಎರಡನೇ ಬಾರಿಗೆ ಏಪ್ರಿಲ್ 29ರಿಂದ ಮೇ 16ರವರೆಗೆ ಪೂರಕ ಪರೀಕ್ಷೆಗಳು ನಡೆದಿದ್ದವು. ಇದೀಗ ಅದರ ಫಲಿತಾಂಶ ಇಂದು ಮಧ್ಯಾಹ್ನ 3 ಗಂಟೆಗೆ ಫಲಿತಾಂಶ ಹೊರ ಬೀಳಲಿದೆ. 2024ರ ಏಪ್ರಿಲ್ 19ರಿಂದ ಮೇ 16ರವರೆಗೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ-2 ಅನ್ನು ನಡೆಸಲಾಗಿತ್ತು. ಈ ವರ್ಷದಿಂದ 3 ಬಾರಿ ಪರೀಕ್ಷೆ ಬರೆಯುವ ಅವಕಾಶವನ್ನು ವಿದ್ಯಾರ್ಥಿಗಳಿಗೆ ನೀಡಲಾಗಿದೆ.
https://karresults.nic.in ವೆಬ್ಸೈಟ್ನಲ್ಲಿ ಫಲಿತಾಂಶ ವೀಕ್ಷಣೆ ಮಾಡಬಹುದು ಎಂದು ಇಲಾಖೆ ಮಾಹಿತಿ ನೀಡಿದೆ.
ಇಂದು ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ
























