ಉಡುಪಿ: ಎಸ್ಎಸ್ಎಲ್ಸಿಯಲ್ಲಿ ಉತ್ತೀರ್ಣನಾಗಿದ್ದ ವಿದ್ಯಾರ್ಥಿ ಟಿಸಿ (ವರ್ಗಾವಣೆ ಪ್ರಮಾಣಪತ್ರ) ಕೊಟ್ಟಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡಿರುವ ಬೈಂದೂರಿನಲ್ಲಿ ನಡೆದಿದೆ. ಬೈಂದೂರು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ನಿತಿನ್ ಆಚಾರಿ (16) ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಟಿಸಿ ಕೊಡದೆ ಮುಖ್ಯಶಿಕ್ಷಕರು ಬೈದಿದ್ದಾರೆ ಎಂದು ಡೆತ್‌ನೋಟ್ ಬರೆದಿಟ್ಟು ನಿತಿನ್ ಆಚಾರಿ ಮನೆಯಲ್ಲಿ ಫ್ಯಾನ್‌ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಟಿಸಿ ಪಡೆದುಕೊಂಡು ಕಾಲೇಜಿಗೆ ಪ್ರವೇಶ ಪಡೆದುಕೊಳ್ಳಬೇಕಿತ್ತು. ಹೀಗಾಗಿ ಪಿಯುಸಿ ಸೇರ್ಪಡೆಯಾಗಲು ಟಿಸಿ ಪಡೆಯಲು ಶಾಲೆಗೆ ಹೋಗಿದ್ದಾನೆ. ಆದರೆ ಮುಖ್ಯಶಿಕ್ಷಕ ಸುರೇಶ್ ಭಟ್ ಟಿಸಿ ಕೊಡದೆ ಬೈದಿದ್ದಾರೆ. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಬಗ್ಗೆ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾನೆ. ಈ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
























