ಕಾರ್ಕಳ : ಕಣಂಜಾರು ಪೆಲತ್ತೂರು ಫ್ರೆಂಡ್ಸ್ ಇದರ ದಶಮಾನೋತ್ಸವ ಪ್ರಯುಕ್ತ ಮೇ 25 ರಂದು ಸಂಜೆ 4 ಗಂಟೆಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ. ವೇದಮೂರ್ತಿ ಷಡಂಗ ಶ್ರೀ ಗುರುರಾಜ ತಂತ್ರಿಯವರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನಡೆಯಲಿದೆ.
ರಾತ್ರಿ 7 ಗಂಟೆಗೆ ಸಭಾ ಕಾರ್ಯಕ್ರದಮ ನಡಯಲಿದ್ದು, ಕೇಮಾರು ಸಾಂದೀಪನಿ ಸಾಧನಾ ಆಶ್ರಮದ ಶ್ರೀ ಈಶ ವಿಠಲದಾಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಪೆಲತ್ತೂರು ಫ್ರೆಂಡ್ಸ್ ಅಧ್ಯಕ್ಷ ಸುರೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕರಾದ ಸುನಿಲ್ ಕುಮಾರ್, ಯಶಪಾಲ್ ಸುವರ್ಣ, ಸುರೇಶ್ ಶೆಟ್ಟಿ ಗುರ್ಮೆ, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ವಿನಯ್ ಕುಮಾರ್ ಸೊರಕೆ ಸೇರಿದಂತೆ ಮೊದಲಾದವರು ಭಾಗಿಯಾಗಲಿದ್ದಾರೆ.
ರಾತ್ರಿ 8.30ರಿಂದ ರಂಗತರಂಗ ಕಲಾವಿದರು ಕಾಪು ಇವರಿಂದ ಒರಿಯೆ ತುಳು ಹಾಸಮಯ ನಾಟಕ ಪ್ರದರ್ಶನಗೊಳ್ಳಲಿದೆ.
ನಾರಿಗೊಂದು ಸೂರು
ಪೆಲತ್ತೂರು ಫ್ರೆಂಡ್ಸ್ ಕ್ಲಬ್ ವತಿಯಿಂದ ನಾರಿಗೊಂದು ಸೂರು ಯೋಜನೆಯಡಿ ಪೆಲತ್ತೂರಿನ ನಿವಾಸಿ ಕಲ್ಯಾಣಿ ನಾಯಕ್ ಅವರಿಗಾಗಿ ನಿರ್ಮಿಸಿರುವ ʼಆಸರೆʼ ಮನೆಯ ಹಸ್ತಾಂತರ ಕಾರ್ಯಕ್ರಮ ನಡೆಯಲಿದೆ.































































