ಸಿಡಿಲು ಬಡಿದು ಕಾಲೇಜು ವಿದ್ಯಾರ್ಥಿ ಸಾವು

ಉಡುಪಿ: ಸ್ನಾನ ಮಾಡಲೆಂದು ಬಚ್ಚಲು ಮನೆ ಬಳಿ ನಿಂತಿದ್ದ ವೇಳೆ ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟ ಘಟನೆ ಶಿರ್ವ ಮಾಣಿಬೆಟ್ಟು ಬಳಿ ಗುರುವಾರ ರಾತ್ರಿ ನಡೆದಿದೆ. ಶಿರ್ವ ಎಂಎಸ್‌ಆರ್‌ಎಸ್ ಕಾಲೇಜಿನ ಎರಡನೇ ವರ್ಷದ ಬಿಸಿಎ ವಿದ್ಯಾರ್ಥಿ, ಶಿರ್ವ ಮಾಣಿಬೆಟ್ಟು ತೋಟದಮನೆ ನಿವಾಸಿ ರಮೇಶ್ ಪೂಜಾರಿಯವರ ಪುತ್ರ ರಕ್ಷಿತ್ ಪೂಜಾರಿ (20) ಮೃತ ದುರ್ದೈವಿ.
ನಿನ್ನೆ ಸಂಜೆ ಸ್ನಾನ ಮಾಡಲು ಬಚ್ಚಲು ಮನೆಯ ಬಳಿ ನಿಂತಿದ್ದ ವೇಳೆ ಸಿಡಿಲು ಬಡಿದಿದೆ. ನೆಲದಲ್ಲಿ ಬಿದ್ದಿದ್ದ ಅವರನ್ನು ಮನೆ ಮಂದಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 10 ಗಂಟೆಯ ವೇಳೆಗೆ ಕೊನೆಯುಸಿರೆಳೆದಿದ್ದಾರೆ.





























































































































error: Content is protected !!
Scroll to Top