ರಘುಪತಿ ಭಟ್ ಗೆಲ್ತೇನೆ ಎಂಬ ಭ್ರಮೆಯಲ್ಲಿದ್ದಾರೆ – ಬಿ.ವೈ. ವಿಜಯೇಂದ್ರ

ಉಡುಪಿ : ರಘುಪತಿ ಭಟ್ ಅವರಿಗೆ ಪಕ್ಷದಿಂದ ಯಾವುದೇ ಅನ್ಯಾಯ ಆಗಿಲ್ಲ. ಸಾಕಷ್ಟು ಬಾರಿ ಅವಕಾಶ ಸಿಕ್ಕಿದೆ. ಇನ್ನೂ ಅನೇಕರಿಗೆ ಅವಕಾಶ ಸಿಗಬೇಕಾಗಿದೆ. ಅವಕಾಶ ಸಿಕ್ಕವರಿಗೆ ಮತ್ತೆ ಅವಕಾಶ ಸಿಗಬೇಕೆಂಬುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಮೇ 27ರಂದು ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಘುಪತಿ ಭಟ್ ಗೆಲ್ತೇನೆ ಎಂಬ ಭ್ರಮೆನಲ್ಲಿದ್ದಾರೆ. ಆದರೆ, ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರಿಗೆ ನೈರುತ್ಯ ಪದವೀಧರ ಕ್ಷೇತ್ರದ ಪದವೀಧರರು ಆಶೀರ್ವಾದ ಮಾಡುತ್ತಿದ್ದಾರೆ. ಮೊದಲ ಬಾರಿ ಸ್ಪರ್ಧಿಸುತ್ತಿದ್ದರೂ ಓರ್ವ ಸಜ್ಜನ ರಾಜಕಾರಣಿ ಎಂದು ಜನ ಮಾತನಾಡುತ್ತಿದ್ದಾರೆ. ಬಿಜೆಪಿ ಪಕ್ಷ, ಸಂಘಟನೆ ಬಲಿಷ್ಠವಾಗಿದೆ. ಧನಂಜಯ್ ಸರ್ಜಿಯನ್ನು ದೊಡ್ಡ ಅಂತರದಲ್ಲಿ ಗೆಲ್ಲಿಸುತ್ತೇವೆ ಎಂದರು.

ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲೂ ಬಿಜೆಪಿ ಮುಖಂಡರು, ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಮೈತ್ರಿ ಅಭ್ಯರ್ಥಿ ಎಸ್. ಎಲ್. ಭೋಜೇಗೌಡ ಅವರು ಕೂಡ ದೊಡ್ಡ ಅಂತರದಲ್ಲಿ ಗೆಲ್ಲುತ್ತಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದಿದ್ದಾರೆ.

ಉಡುಪಿ ಘಟನಾಯಕರ ಸಭೆ
ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಕಿದಿಯೂರು ಹೋಟೆಲ್‌ನ ಮಾಧವ ಕೃಷ್ಣ ಸಭಾಭವನದಲ್ಲಿ ಚುನವಣಾ ಪೂರ್ವ ತಯಾರಿಯ ಕುರಿತು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ . ವಿಜಯೇಂದ್ರ ಅವರ ನೇತೃತ್ವದಲ್ಲಿ ಘಟನಾಯಕರ ಸಭೆಯನ್ನು ಆಯೋಜಿಸಲಾಗಿತ್ತು .

ಈ ವೇಳೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್‌ಪಾಲ್ ಸುವರ್ಣ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ್ ಪೂಜಾರಿ, ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿಯಾದ ಡಾ. ಧನಂಜಯ ಸರ್ಜಿ, ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್.ಎಲ್. ಭೋಜಗೌಡ, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್ , ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್, ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಸ್ಥಳೀಯ ಬಿಜೆಪಿ ಮುಖಂಡರು, ಮಹಾಶಕ್ತಿ ಕೇಂದ್ರದ ಪ್ರಮುಖರು, ಬಿಜೆಪಿ ಕಾರ್ಯಕರ್ತರು ಸೇರಿದಂತೆ ಹಲವರು ಉಪಸ್ಥಿತರಿದ್ದರು.





























































































































error: Content is protected !!
Scroll to Top