ಕಾರ್ಕಳ : ಪಾದಚಾರಿಗೆ ಡಿಕ್ಕಿ ಹೊಡೆದು ಸ್ಕೂಟಿ ಸವಾರೆ ಪರಾರಿಯಾದ ಘಟನೆ ಮೇ 28ರಂದು ಕಾರ್ಕಳ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ.
ಕುಕ್ಕುಂದೂರು ಗ್ರಾಮದ ಸುಧಾ ಎಂಬವರು ಮಾರಿಗುಡಿ ದೇವಸ್ಥಾನದ ಎದುರುಗಡೆ ರಸ್ತೆಯ ಎಡಬದಿಯಲ್ಲಿ ಬಸ್ ನಿಲ್ದಾಣದ ಕಡೆಗೆ ನಡೆದುಕೊಂಡು ಹೋಗುತ್ತಿರುವಾಗ ಅನಂತಶಯನದ ಕಡೆಯಿಂದ ಕಾರ್ಕಳ ಬಸ್ ನಿಲ್ದಾಣದ ಕಡೆಗೆ ಸ್ಕೂಟಿಯೊಂದನ್ನು ಅದರ ಸವಾರಳು ಅತಿ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ರಸ್ತೆಯ ತೀರಾ ಎಡಭಾಗಕ್ಕೆ ಬಂದು ಸುಧಾ ಅವರಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಸುಧಾರವರು ರಸ್ತೆಗೆ ಬಿದ್ದು ಗಾಯಗೊಂಡಿರುತ್ತಾರೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಡಿಕ್ಕಿ ಹೊಡೆದ ಸ್ಕೂಟಿ ಸವಾರೆ ನಿಲ್ಲಿಸದೆ ಸ್ಥಳದಿಂದ ಓಡಿ ಹೋಗಿರುವುದಾಗಿ ಸುಧಾ ಅವರು ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಪಾದಚಾರಿಗೆ ಸ್ಕೂಟಿ ಡಿಕ್ಕಿ : ಸವಾರೆ ಪರಾರಿ






























































