ಜೂ. 1 ರಿಂದ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

ಉಡುಪಿ : ಪ್ರಸಕ್ತ ಸಾಲಿನ ಮಳೆಗಾಲದ ಅವಧಿಯಲ್ಲಿ ಉಡುಪಿ ಜಿಲ್ಲೆಯೂ ಸೇರಿದಂತೆ ಕರ್ನಾಟಕ ಕರಾವಳಿಯಲ್ಲಿ ಯಾವುದೇ ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್ ಅಥವಾ ಔಟ್‌ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರವರೆಗೆ ಒಟ್ಟು 61 ದಿನಗಳ ನಿಷೇಧವನ್ನು ಹೇರಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಮೀನುಗಾರಿಕೆ ನಿಷೇಧಿತ ಅವಧಿಯಲ್ಲಿ ಕೇವಲ 10 ಅಶ್ವ ಶಕ್ತಿಯ ವರೆಗಿನ ಸಾಮರ್ಥ್ಯದ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ/ ನಾಡದೋಣಿಗಳ ಮೂಲಕ ಮೀನುಗಾರಿಕೆಯಲ್ಲಿ ತೊಡಗಲು ಅನುಮತಿ ಇರುತ್ತದೆ. ಆದಾಗ್ಯೂ ಇಲಾಖೆ ಹಾಗೂ ಜಿಲ್ಲಾಡಳಿತದಿಂದ ಮೀನುಗಾರರ ಸುರಕ್ಷತೆಗಾಗಿ ನೀಡಲಾಗುವ ಸೂಚನೆ-ಮಾರ್ಗಸೂಚಿಯನ್ನು ಪಾಲಿಸಬೇಕು. ಮಾರ್ಗಸೂಚಿಯನ್ನು ಉಲ್ಲಂಘಿಸುವ ಮೀನುಗಾರಿಕೆ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ (ನಿಯಂತ್ರಣ) ಕಾಯ್ದೆಯನ್ವಯ ದಂಡನೆಗೆ ಹೊಣೆಯಾಗುವುದಲ್ಲದೇ, ಒಂದು ವರ್ಷದ ಅವಧಿಗೆ ರಾಜ್ಯ ಮಾರಾಟಕರ ರಹಿತ ಡೀಸೆಲ್ ಪಡೆಯಲು ಅನರ್ಹರಾಗುತ್ತಾರೆ. ಈ ಆದೇಶವನ್ನು ಕರಾವಳಿ ಪ್ರದೇಶದ ಎಲ್ಲಾ ಮೀನುಗಾರರು ಪಾಲಿಸಿ, ಸರಕಾರದೊಂದಿಗೆ ಸಹಕರಿಸುವಂತೆ ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





























































































































error: Content is protected !!
Scroll to Top