ಹೆಬ್ರಿ : ಕೇಂದ್ರ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ನಡೆಸುವ ವಿಜ್ಞಾನ ಮಾದರಿ ತಯಾರಿಯ ರಾಷ್ಟ್ರ ಮಟ್ಟದ ಇನ್ ಸ್ಪೈರ್ ಅವಾರ್ಡ್ ಸ್ಪರ್ಧೆಯಲ್ಲಿ ಅಮೃತ ಭಾರತಿ ವಿದ್ಯಾಲಯದ ಪ್ರೌಢಶಾಲೆಯ ವಿದ್ಯಾರ್ಥಿ ಪ್ರಣಾಮ್ ಜಿ. ಪೂಜಾರಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸ್ಪರ್ಧೆಯಲ್ಲಿ ಉಡುಪಿ ಜಿಲ್ಲಾ ಮಟ್ಟದಲ್ಲಿ 133 ಮಾದರಿಗಳನ್ನು ಪ್ರಸ್ತುತಪಡಿಸಿದ್ದು, ಅದರಲ್ಲಿ 13 ವಿದ್ಯಾರ್ಥಿಗಳ ಮಾದರಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ. ಈ ಸ್ಪರ್ಧೆಯಲ್ಲಿ ಪ್ರಣಮ್ ಮಲ್ಟಿ ಪರ್ಪಸ್ ರೋವರ್ ಯಂತ್ರವನ್ನು ತಯಾರಿಸುವ ಮೂಲಕ ಗಮನ ಸೆಳೆದಿದ್ದಾರೆ. ಈ ಮಾದರಿಯ ತಯಾರಿಕೆಗೆ ಸಹಾಯಕನಾಗಿ ಪವನ್ ಹೆಬ್ಬಾರ್ ಸಹಕರಿಸಿದ್ದಾರೆ. ಶಾಲಾ ವಿಜ್ಞಾನ ಶಿಕ್ಷಕ ಮಾದರಿ ತಯಾರಿಯಲ್ಲಿ ತರಬೇತಿ ನೀಡಿರುತ್ತಾರೆ. ಇವರೆಲ್ಲರಿಗೆ ಸಂಸ್ಥೆಯ ಆಡಳಿತ ಮಂಡಳಿ ಮತ್ತು ಮುಖ್ಯ ಶಿಕ್ಷಕಿ ಅಪರ್ಣಾ ಆಚಾರ್ ಅಭಿನಂದಿಸಿದ್ದಾರೆ.






























































