ಕಾರ್ಕಳ : ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಗಾಯಗೊಂಡು ಆಸ್ಪತ್ರೆ ದಾಖಲಾದ ಘಟನೆ ಮೇ 30ರ ಬೆಳಿಗ್ಗೆ ಆನೆಕೆರೆ ಸಮೀಪ ಸಂಭವಿಸಿದೆ.
ಮಾಳ ಗ್ರಾಮದ ಸುಶಾಂತ್ ಬೈಕ್ ಸವಾರಿ ಮಾಡಿಕೊಂಡು ಬರುತ್ತಿದ್ದು, ಆನೆಕೆರೆಯ ಮಂಗಳೂರು ರಸ್ತೆಯಲ್ಲಿ ಎದುರುಗಡೆಯಿಂದ ಬರುತ್ತಿದ್ದ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮವಾಗಿ ಸವಾರ ಬೈಕ್ ಸಮೇತ ನೆಲಕ್ಕೆ ಬಿದ್ದು ಗಾಯಗೊಂಡಿದ್ದಾರೆ. ಖಾಸಗಿ ಬಸ್ಸೊಂದನ್ನು ಓವರ್ ಟೇಕ್ ಮಾಡುವ ಧಾವಂತದಲ್ಲಿ ಈ ಅವಘಡ ಸಂಭವಿಸಿದೆ ಎನ್ನಲಾಗುತ್ತಿದೆ. ಗಾಯಾಳುವನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅಜ್ಜರಕಾಡು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಪಘಾತದಿಂದಾಗಿ ಬೈಕ್ ನಜ್ಜಗುಜ್ಜಾಗಿದ್ದು, ರಿಕ್ಷಾ ಜಖಂಗೊಂಡಿದೆ.
ರಿಕ್ಷಾಕ್ಕೆ ಬೈಕ್ ಡಿಕ್ಕಿ – ಸವಾರ ಆಸ್ಪತ್ರೆ ದಾಖಲು




















