ಹೆಬ್ರಿ : ಪರಿಶ್ರಮ ಶಿವಪುರ ಇವರ ಆಶ್ರಯದಲ್ಲಿ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ. ಉಡುಪಿ, ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ, ಹೆಚ್.ಡಿ.ಎಫ್.ಸಿ. ಬ್ಯಾಂಕ್ ಮಂಗಳೂರು, ರಕ್ತಕೇಂದ್ರ ಮಣಿಪಾಲ ಇವರ ಸಹಯೋಗದಲ್ಲಿ ಮೇ 26ರಂದು ಶಿವಪುರ ಸರಿಕಾರಿ ಪ್ರೌಢಶಾಲೆಯಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ನಡೆಯಿತು. ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸತೀಶ್ ಸಾಲ್ಯಾನ್ ಮಣಿಪಾಲ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಕಳೆದ ಹಲವು ವರ್ಷಗಳಿಂದ ಉಡುಪಿ ಜಿಲ್ಲೆಯಲ್ಲಿ ರಕ್ತದ ಕೊರತೆ ನೀಗಿಸಲು ಶ್ರಮಿಸುತ್ತಿದ್ದ ರಕ್ತದಾನಿಗಳ ತಂಡ ಇಂದು ಪರಿಶ್ರಮ ಶಿವಪುರ ಎಂಬ ಸಂಘವನ್ನು ಹುಟ್ಟು ಹಾಕಿ ಮೊದಲ ರಕ್ತದಾನ ಶಿಬಿರವನ್ನು ಶಿವಪುರದಲ್ಲಿ ಆಯೋಜಿಸಿರುವುದು ಹೆಮ್ಮೆಯ ವಿಷಯ. ತಂಡದ ಸೇವೆ ಹೀಗೆ ಮುಂದುವರಿಯಲಿ ಎಂದರು.
ಸನ್ಮಾನ
ಈ ಸಂದರ್ಭ ಸತೀಶ್ ಸಾಲ್ಯಾನ್ ಮಣಿಪಾಲ ಮತ್ತು ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಶಿವಪುರ ಸರಕಾರಿ ಪ್ರೌಢಶಾಲೆಯ ನಾಲ್ವರು ವಿದ್ಯಾರ್ಥಿಗಳು ಹಾಗೂ 50 ಕ್ಕಿಂತಲೂ ಅಧಿಕ ಬಾರಿ ರಕ್ತದಾನ ಮಾಡಿದ ಶಿವಪುರದ ಜನಾರ್ಧನ್ ಭಟ್ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಶಿವಪುರ ಪಂಚಾಯತ್ ಅಧ್ಯಕ್ಷೆ ಶೋಭಾ ಶೆಟ್ಟಿ , ತಾಲೂಕು ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಸುರೇಶ್ ಶೆಟ್ಟಿ ಶಿವಪುರ, ಹೆಬ್ರಿ ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷ ಲಕ್ಷ್ಮೀನಾರಾಯಣ, ಹೆಬ್ರಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಿವಪ್ರಸಾದ್ ಕೋಟ್ಯಾನ್, ಡಾ. ಗುರು ಪ್ರಸಾದ್, ಮಣಿಪಾಲದ ವೈದ್ಯ ಡಾ. ಅಝೀಸ್, ಗುತ್ತಿಗೆದಾರ ಶ್ರೀನಿವಾಸ್ ಹೆಬ್ಬಾರ್, ಹೆಬ್ರಿ ತಾಲೂಕು ಮಾಜಿ ಅಧ್ಯಕ್ಷ ರಮೇಶ್ ಪೂಜಾರಿ ಶಿವಪುರ, ಹೆಬ್ರಿ ಪಂಚಾಯತ್ ಮಾಜಿ ಅಧ್ಯಕ್ಷ ಸುಧಾಕರ್ ಹೆಗ್ಡೆ, ಶಿವಪುರ ಪಂಚಾಯತ್ ಮಾಜಿ ಅಧ್ಯಕ್ಷೆ ಸುಗಂಧಿ ಎಸ್. ನಾಯಕ್, ಮಂಗಳೂರು ಹೆಚ್.ಡಿ.ಎಫ್.ಸಿ ಬ್ಯಾಂಕ್ ಪ್ರಬಂಧಕ ಮನೋಜ್ ಪುತ್ರನ್, ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ ಅಧ್ಯಕ್ಷ ಧನುಷ್, ಪರಿಶ್ರಮ ಶಿವಪುರ ಇದರ ಗೌರವಾಧ್ಯಕ್ಷ ದಿವಾನಂದ ಪೂಜಾರಿ, ಅಧ್ಯಕ್ಷ ಅಜಿತ್ ಶೆಟ್ಟಿ, ಉಪಾಧ್ಯಕ್ಷ ಪ್ರದೀಪ್ ಹಾಗೂ ಪರಿಶ್ರಮ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಶಿಬಿರದಲ್ಲಿ 80 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.
























