ಹಾಸನ : ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳನ್ನೊಳಗೊಂಡ ಪೆನ್ಡ್ರೈವ್ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನವೀನ್ ಗೌಡ ಹಾಗೂ ಚೇತನ್ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಹಾಸನದ 2ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ಸಿ ಕೋರ್ಟ್ ಆದೇಶಿಸಿದೆ. ಜೂ. 1 ಕಸ್ಟಡಿ ಅವಧಿ ಮುಕ್ತಾಯ ಹಿನ್ನೆಲೆ ಎಸ್ಐಟಿ ಅಧಿಕಾರಿಗಳು ಕೋರ್ಟ್ಗೆ ಹಾಜರುಪಡಿಸಿದ್ದರು.
ಇದೇ ಮೇ .30 ರಂದು ಪೆನ್ಡ್ರೈವ್ ಹಂಚಿಕೆ ಪ್ರಕರಣದ ಇಬ್ಬರು ಆರೋಪಿಗಳಾದ ಮಾಜಿ ಶಾಸಕ ಪ್ರೀತಂಗೌಡ ಆಪ್ತ ಲಿಖಿತ್ ಗೌಡ ಹಾಗೂ ಪ್ರೀತಂಗೌಡ ಕಛೇರಿ ಸಹಾಯಕ ಯಲಗುಂದ ಚೇತನ್ ಅವರಿಗೆ ‘ದೇಶ ಬಿಟ್ಟು ಹೋಗಬಾರದು, ವಾರಕ್ಕೆ ಒಮ್ಮೆ ತನಿಖಾಧಿಕಾರಿ ಎದುರು ಹಾಜರಾಗಬೇಕು ಎಂಬ ಷರತ್ತು ವಿಧಿಸಿ ಹಾಸನ ಜೈಲಿನಿಂದ ಬಿಡುಗಡೆ ಮಾಡಿ ಹಾಸನದ 3 ನೇ ಅದಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿತ್ತು.
ಮೇ.12 ರಂದು ಎಸ್ಐಟಿ ಪೊಲೀಸರು ಇಬ್ಬರನ್ನು ಬಂದಿಸಿದ್ದರು. ಇದೀಗ 18 ದಿನಗಳ ಬಳಿಕ ಕೇಸ್ನ ಆರು ಮತ್ತು ಏಳನೇ ಆರೋಪಿಗಳು ಬಿಡುಗಡೆಯಾಗಿದ್ದಾರೆ. ಈ ಕುರಿತು ಮಾತನಾಡಿದ ಆರೋಪಿಗಳ ಪರ ವಕೀಲ ಮೋಹನ್, ‘ನಮ್ಮ ಕಕ್ಷೀದಾರರು ಯಾವುದೇ ತಪ್ಪು ಮಾಡಿಲ್ಲ ಎಂದು ವಾದ ಮಂಡಿಸಿದ್ದೆವು. ನಮ್ಮ ವಾದ ಆಲಿಸಿ ನ್ಯಾಯಾಲಯ ಜಾಮೀನು ನೀಡಿದೆ ಎಂದು ಹೇಳಿದ್ದಾರೆ.






































