ಚಂದ್ರಬಾಬು ನಾಯ್ಡು, ಪವನ್ ಕಲ್ಯಾಣ್ ಮೈತ್ರಿಗೆ ಭರ್ಜರಿ ಗೆಲುವು
ಅಮರಾವತಿ : ಕರ್ನಾಟಕ ನೆರೆರಾಷ್ಟ್ರ ಆಂಧ್ರಪ್ರದೇಶದ ರಾಜಕೀಯಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. 5 ವರ್ಷಗಳ ಬಳಿಕ ಜನಸೇನಾ, ಟಿಡಿಪಿ ಮತ್ತು ಜನಸೇನಾ ಮೈತ್ರಿಗೆ ಗೆಲುವಾಗಿದೆ. ಸಿಎಂ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್ಆರ್ ಕಾಂಗ್ರೆಸ್ಗೆ ಹೀನಾಯ ಸೋಲಾಗಿದೆ.
ಆಂಧ್ರಪ್ರದೇಶದಲ್ಲಿ ಲೋಕಸಭಾ ಜೊತೆಗೆ ವಿಧಾನಸಭಾ ಚುನಾವಣೆ ಕೂಡ ನಡೆದಿದೆ. 175 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಜನಸೇನಾ, ಟಿಡಿಪಿ ಮತ್ತು ಜನಸೇನಾ ಮೈತ್ರಿಗೆ ಭರ್ಜರಿ ಜಯ ಸಿಕ್ಕಿದೆ. ಟಿಡಿಪಿ ಬರೋಬ್ಬರಿ 130 ಕ್ಷೇತ್ರಗಳಲ್ಲಿ ಗೆಲುವಿನತ್ತ ದಾಪುಗಾಲಿಟ್ಟಿದೆ. ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಕ್ಷ 20 ಮತ್ತು ಬಿಜೆಪಿ 7 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವತ್ತ ಹೆಜ್ಜೆ ಹಾಕಿದೆ. ವೈಎಸ್ಆರ್ ಕಾಂಗ್ರೆಸ್ ಹೀನಾಯ ಸೋಲು ಕಂಡಿದೆ.

ಜೂನ್ 9ನೇ ತಾರೀಕಿನಂದು ಆಂಧ್ರಪ್ರದೇಶದ ನೂತನ ಸಿಎಂ ಆಗಿ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ನಟ ಪವನ್ ಕಲ್ಯಾಣ್ ಡಿಸಿಎಂ ಆಗಲಿದ್ದಾರೆ ಎಂದು ತಿಳಿದು ಬಂದಿದೆ.
2019ರ ರಾಜ್ಯ ಚುನಾವಣೆಯಲ್ಲಿ, ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷ (ವೈಎಸ್‌ಆರ್‌ಸಿಪಿ) 175 ಸ್ಥಾನಗಳಲ್ಲಿ 151 ಸ್ಥಾನಗಳನ್ನು ಗೆದ್ದು ಅಭೂತಪೂರ್ವ ಜಯ ಸಾಧಿಸಿತ್ತು.

































































