ನೋಟಾಕ್ಕೂ ಬಿದ್ದಿದೆ ಗಮನಾರ್ಹ ಮತ
ಕಾರ್ಕಳ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರಿಗೆ ಭಾರಿ ಹಿನ್ನಡೆ ಉಂಟಾಗಿದ್ದು, ಬಿಜೆಪಿಯು ಮುನ್ನಡೆ ಸಾಧಿಸಿದೆ. ಜಯಪ್ರಕಾಶ್ ಹೆಗ್ಡೆ 2,02,680 ಮತಗಳನ್ನು, ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಅವರು 3,26,330 ಮತಗಳನ್ನು ಪಡೆದುಕೊಂಡಿದ್ದಾರೆ. ಜೊತೆಗೆ ಕ್ಷೇತ್ರದಲ್ಲಿ 5,108 ಅಷ್ಟು ನೋಟಾ ಮತ ಚಲಾವಣೆಯಾಗಿದೆ. ಕೋಟ ಶ್ರೀನಿವಾಸ್ ಪೂಜಾರಿ ಅವರು 1,23,650 ಮತಗಳ ಮುನ್ನಡೆ ಸಾಧಿಸಿದ್ದಾರೆ.































































