ಬೆಂಗಳೂರು: ಕರ್ನಾಟಕ ಬಿಜೆಪಿ ಘಟಕ ದಾಖಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿ ಬೆಂಗಳೂರಿನ ವಿಶೇಷ ನ್ಯಾಯಾಲಯ ಜೂ. 7ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜಾಮೀನು ನೀಡಿದೆ.
ಪ್ರಕರಣದಲ್ಲಿ 4ನೇ ಆರೋಪಿಯಾಗಿರುವ ರಾಹುಲ್ ಗಾಂಧಿ ಅವರು ಶುಕ್ರವಾರ ಪೂರ್ವಾಹ್ನ 11 ಗಂಟೆಗೆ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ವಿಚಾರಣೆಗಾಗಿ ಹಾಜರಾದರು. ವಿಚಾರಣೆ ಕೈಗತ್ತಿಕೊಂಡ ನ್ಯಾಯಪೀಠ, ರಾಹುಲ್ ಗಾಂಧಿ ಅವರ ಜಾಮೀನು ಅರ್ಜಿ ಪರಿಶೀಲಿಸಿ ಜಾಮೀನು ನೀಡಿದೆ.
ಮಾಜಿ ಸಂಸದ ಡಿಕೆ ಸುರೇಶ್ ಅವರು ಶ್ಯೂರಿಟಿ ನೀಡಿದ್ದು, ಮುಂದಿನ ವಿಚಾರಣೆಯನ್ನು ಜೂನ್ 30ಕ್ಕೆ ಮುಂದೂಡಿಕೆ ಮಾಡಲಾಗಿದೆ.
























