ಕಾರ್ಕಳ: ಬೈಕ್‌ಗಳು ಡಿಕ್ಕಿಯಾಗಿ ಸವಾರರು ಗಾಯಗೊಂಡಿರುವ ಘಟನೆ ಕುಕ್ಕುಂದೂರು ಗ್ರಾಮದ ಪಿಲಿಚಂಡಿ ದೇವಸ್ಥಾನದ ಬಳಿ ಸಂಭವಿಸಿದೆ. ಉಡುಪಿ ಕೆರ್ಕಾಲ್‌ಬೆಟ್ಟು ಗ್ರಾಮದ ನಮನ (34) ಎಂಬವರು ಬೈಕಿನಲ್ಲಿ ಉಡುಪಿಯತ್ತ ಹೋಗುತ್ತಿದ್ದಾಗ ಕುಕ್ಕುಂದೂರಿನ ಪಿಲಿಚಂಡಿ ದೈವಸ್ಥಾನದ ಬಳಿ ಬೈಲೂರು ಕಡೆಯಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ನಮನ ಬೈಕ್ ಸಮೇತ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಉಡುಪಿ ಕಡೆಯಿಂದ ಬರುತ್ತಿದ್ದ ಕಾರು ಚಾಲಕರು ಗಾಯಾಳುವಿಗೆ ಆರೈಕೆ ಮಾಡಿ ಚಿಕಿತ್ಸೆಗಾಗಿ ಕಾರ್ಕಳ ಟಿಎಂಎ ಪೈ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ನಮನ ಉಡುಪಿಯ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಡಿಕ್ಕಿ ಹೊಡೆದ ಬೈಕ್ ಸವಾರನ ತಲೆಗೂ ಗಾಯವಾಗಿದ್ದು, ಇತನಿಗೂ ಪ್ರಥಮ ಚಿಕಿತ್ಸೆ ಕೊಡಿಸಲಾಗಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬೈಕ್‌ಗಳ ಡಿಕ್ಕಿ : ಸವಾರರಿಗೆ ಗಾಯ


































