ವೃದ್ಧೆ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ಜೀವನದಲ್ಲಿ ಜಿಗುಪ್ಸೆಗೊಂಡು ವೃದ್ಧೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ. 15ರಂದು ಕಣಂಜಾರು ಗ್ರಾಮದಲ್ಲಿ ಸಂಭವಿಸಿದೆ.
ಎಸ್‌. ಲಲಿತ (83) ಆತ್ಮಹತ್ಯೆಗೆ ಶರಣಾದವರು. ಇವರು ಕಳೆದ 3-4 ವರ್ಷಗಳಿಂದ ಉಬ್ಬಸ ಮತ್ತು ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ಪಡೆಯುತ್ತಿದ್ದರೂ ಸಂಪೂರ್ಣ ಗುಣಮುಖರಾಗದೇ ಇದ್ದ ಕಾರಣ ಜೀವನದಲ್ಲಿ ಜಿಗುಪ್ಸೆಗೊಂಡು ತನ್ನ ವಾಸ್ತವ್ಯದ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.







































































error: Content is protected !!
Scroll to Top