ಕಾಟೇರಾ ಮತ್ತೆ ಪೊಲೀಸ್‌ ಕಸ್ಟಡಿಗೆ – ಪವಿತ್ರಾ ಗೌಡ ಜೈಲು ಪಾಲು

ಬೆಂಗಳೂರು : ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಎ೧ ಆರೋಪಿ ಪವಿತ್ರಾ ಗೌಡ ಹಾಗೂ ನಟ ದರ್ಶನ್‌ ಸೇರಿದಂತೆ ಒಟ್ಟು ಹತ್ತಕ್ಕೂ ಹೆಚ್ಚು ಆರೋಪಿಗಳನ್ನು ಜೂ. 20ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ವಾದ-ಪ್ರತಿವಾದ ಆಲಿಸಿದ ಕೋರ್ಟ್ ನಟ ದರ್ಶನ್‌ ಹಾಗೂ ಕೆಲವು ಆರೋಪಿಗಳನ್ನು ಮತ್ತೆ ಪೊಲೀಸ್‌ ಕಸ್ಟಡಿಗೆ ನೀಡಿದೆ ಎನ್ನಲಾಗಿದೆ.

ನಟ ದರ್ಶನ್, ವಿನಯ್, ಪ್ರದೋಶ್, ಮತ್ತು ಧನ್‌ರಾಜ್‌ನನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಪ್ರಕರಣದ ಇತರೆ ಆರೋಪಿಗಳಾದ ಎ1 ಪವಿತ್ರಾ ಗೌಡ ಸೇರಿದಂತೆ 9 ಮಂದಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು ಜೈಲುಪಾಲಾಗಿದ್ದಾರೆ.
ಕೋರ್ಟ್ ಆದೇಶದ ಮೇರೆಗೆ ಪ್ರರಕಣದ ವಿಚಾರಣೆ ಸಲುವಾಗಿ ಆರೋಪಿಗಳನ್ನು ಪೊಲೀಸರು ಬೆಂಗಳೂರು ಕೇಂದ್ರ ಕಾರಾಗೃಹ (ಪರಪ್ಪನ ಅಗ್ರಹಾರ)ಕ್ಕೆ ಕರೆದೊಯಲು ಸಜ್ಜಾಗಿದ್ದಾರೆ.































































































































error: Content is protected !!
Scroll to Top