ವ್ಯಕ್ತಿತ್ವ ವಿಕಸನ ಶಿಬಿರ – ವಿದ್ಯಾರ್ಥಿ ವೇತನ ವಿತರಣೆ
ಕಾರ್ಕಳ : ವಿಶ್ವಬ್ರಾಹ್ಮಣ ಸಮಾಜೋದ್ಧಾರಕ ಸಭಾದ 81ನೇ ವಾರ್ಷಿಕ ಮಹಾಸಭೆ ಮತ್ತು ವ್ಯಕ್ತಿತ್ವ ವಿಕಸನ ಶಿಬಿರ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಜೂ. 23ರಂದು ಪೆರ್ವಾಜೆ ವಿಶ್ವಕರ್ಮ ಸಮಾಜ ಭವನದಲ್ಲಿ ನಡೆಯಲಿದೆ.
ಬೆಳಿಗ್ಗೆ 9 ಗಂಟೆಗೆ ನಡೆಯುವ ಸಭೆಯಲ್ಲಿ ವಿಶ್ವಬ್ರಾಹ್ಮಣ ಸಮಾಜೋದ್ಧಾರಕ ಸಭಾದ ಅಧ್ಯಕ್ಷ ಬಿ. ಪ್ರಕಾಶ್ ಆಚಾರ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಂಗಳೂರು ಸಹಚಿಂತನ ಪ್ರಕಾಶಕರು ಎಸ್.ವಿ. ಆಚಾರ್ಯ ಹಾಗು ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಶಿಲ್ಪಿ ರಾಮಚಂದ್ರ ಆಚಾರ್ಯ ಭಾಗಿಯಾಗಲಿದ್ದಾರೆ.

10 ಗಂಟೆಗೆ ವ್ಯಕ್ತಿತ್ವ ವಿಕಸನ ಶಿಬಿರ ಮತ್ತು ವಿಶ್ವ ಬ್ರಾಹ್ಮಣ ಸಮಾಜದ ವಿದ್ಯಾರ್ಥಿ – ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ನಡೆಯಲಿದೆ. ಸಂಪನ್ಮೂಲ ವ್ಯಕ್ತಿಯಾಗಿ ಉಪನ್ಯಾಸಕಿ ಅಕ್ಷಯ ಗೋಖಲೆ ಪಾಲ್ಗೊಳ್ಳಲಿದ್ದಾರೆ. ವಿ.ಬಿ.ಎಸ್. ಸಭಾದ ಅಧ್ಯಕ್ಷ ಪ್ರಕಾಶ್ ಆಚಾರ್ಯ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಶಿಲ್ಪಿ ರಾಮಚಂದ್ರ ಆಚಾರ್ಯ ಹಾಗೂ ಡಾ. ಗೋಪಾಲಕೃಷ್ಣ ಆಚಾರ್ಯ ಭಾಗಿಯಾಗಲಿದ್ದಾರೆ ಎಂದು ಆಯೋಜಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.































































