ಮುದ್ರಾಡಿ ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ನೋಟ್‌ಪುಸ್ತಕ ವಿತರಣೆ

ಹೆಬ್ರಿ: ಮುದ್ರಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಿ ಪ್ರಶಾಂತ ಶೆಟ್ಟಿ ಇವರು ಕೊಡುಗೆಯಾಗಿ ನೀಡಿದ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ಬುಧವಾರ ಜರುಗಿತು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ಶುಭದರ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮುದ್ರಾಡಿ ಗ್ರಾಮ ಪಂಚಾಯತ್‌ನ ಹಿರಿಯ ಸದಸ್ಯ ಗಣಪತಿ ಎಂ., ಶಾಲೆಯ ಪೋಷಕರಾದ ಸುಷ್ಮಾ ನವೀನ್ ಶೆಟ್ಟಿ ಮತ್ತು ಕೊಡುಗೆ ನೀಡಿದ ಸ್ವಾತಿ ಪ್ರಶಾಂತ ಶೆಟ್ಟಿ ಉಪಸ್ಥಿತರಿದ್ದರು.
185 ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಿಸಿ ಮಾತನಾಡಿದ ಸ್ವಾತಿ ಪ್ರಶಾಂತ ಶೆಟ್ಟಿ ವಿದ್ಯಾರ್ಥಿ ಜೀವನದಲ್ಲಿ ಆಸಕ್ತಿಯಿಂದ ಕಲಿತು ಉತ್ತಮ ಗುಣಗಳನ್ನು ಬೆಳೆಸಿಕೊಂಡು ಸಮಾಜಕ್ಕೆ ಮಾದರಿಯಾಗಿ ಬದುಕಿ ಎಂದು ಹೇಳಿದರು.
ಗಣಪತಿ ಎಂ. ಮಾತನಾಡಿ ಕೊಡುಗೆ ನೀಡಿದ ನೋಟ್ ಪುಸ್ತಕ ನಿಮ್ಮ ಶೈಕ್ಷಣಿಕ ಪ್ರಗತಿ ಪೂರಕವಾದದ್ದು. ಇದನ್ನು ಸದುಪಯೋಗಪಡಿಸಿಕೊಳ್ಳಿ ಗುರು ಹಿರಿಯರ ಮಾರ್ಗದರ್ಶನದಂತೆ ಮುನ್ನಡೆಯಿರಿ ಎಂದು ಶುಭ ಹಾರೈಸಿದರು.
ಶಿಕ್ಷಕ ವೃಂದ, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ಶ್ರೀನಿವಾಸ ಭಂಡಾರಿ ಸ್ವಾಗತಿಸಿ ವಂದಿಸಿದರು.































































error: Content is protected !!
Scroll to Top