ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ. 19ರಂದು ನಿಟ್ಟೆಯಲ್ಲಿ ಸಂಭವಿಸಿದೆ. ರೇಖಾ (62) ನೇಣಿಗೆ ಶರಣಾದವರು. ಇವರು ಕಳೆದ ಸುಮಾರು 7 ತಿಂಗಳಿನಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಈ ವಿಷಯದಲ್ಲೇ ಜೀವನದಲ್ಲಿ ಮನನೊಂದು ಬುಧವಾರದಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.































































error: Content is protected !!
Scroll to Top