ಬಸ್‌ ಟಿಕೆಟ್‌ ದರ ಏರಿಕೆಯಿಲ್ಲ : ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ರಾಜ್ಯ ಸಾರಿಗೆ ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಪೆಟ್ರೋಲ್, ಡೀಸೆಲ್ ದರ ಏರಿಕೆ ಹಿನ್ನೆಲೆಯಲ್ಲಿ ಬಸ್ ಪ್ರಯಾಣ ದರ ಏರಿಕೆ ಮಾಡುವುದಿಲ್ಲ. ರಾಜ್ಯದ ಅಭಿವೃದ್ಧಿ ಯೋಜನೆಗಳಿಗಾಗಿ ತೈಲ ದರ ಏರಿಕೆ ಮಾಡಲಾಗಿದೆ. ಖಾತರಿ ಯೋಜನೆಗಳಿಗೆ ಈ ವರ್ಷ 60 ಸಾವಿರ ಕೋಟಿ ಅಗತ್ಯವಿದ್ದು, ಸಂಪನ್ಮೂಲ ಕ್ರೋಢೀಕರಣ ಮಾಡಬೇಕಾಗಿದೆ ಎಂದರು.
ಅಂಗನವಾಡಿ ಕಾರ್ಯಕರ್ತೆಯರ ಮುಷ್ಕರ ಕುರಿತಂತೆ ಬರುವ ಸೋಮವಾರ ಸಭೆ ನಡೆಸಲಾಗುವುದು. ಇದಕ್ಕೂ ಮುನ್ನ ಸಂಬಂಧಪಟ್ಟ ಸಚಿವರು ಮಾತುಕತೆ ನಡೆಸಲಿದ್ದಾರೆ. ತುಂಗಭದ್ರಾ ಸಮಾನಾಂತರ ಜಲಾಶಯ ನಿರ್ಮಾಣ ಮಾಡುವ ಸಂಬಂಧ ಶೀಘ್ರದಲ್ಲೇ ಆಂಧ್ರ ಪ್ರದೇಶ ಹಾಗೂ ತೆಲಂಗಾಣ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.
ಇತ್ತೀಚೆಗಷ್ಟೇ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಬಸ್‌ ಟಿಕೆಟ್‌ ದರ ಏರಿಕೆ ಅನಿವಾರ್ಯ ಎಂದು ಹೇಳಿದ್ದರು. ಕೆಎಸ್‌ಆರ್‌ಟಿಸಿ ನಿಗಮಗಳಿಗೆ ಸರಕಾರ ಶಕ್ತಿ ಯೋಜನೆಯ 1100 ಕೋ. ರೂ. ಬಾಕಿಯಿಟ್ಟಿದೆ ಎಂದು ಹೇಳಿದ್ದರು.











































































error: Content is protected !!
Scroll to Top