ಕ್ರೈಸ್ಟ್‌ಕಿಂಗ್‌ : ಯೋಗ ದಿನಾಚರಣೆ

ಕಾರ್ಕಳ : ಕ್ರೈಸ್ಟ್‌ಕಿಂಗ್‌ ಶಿಕ್ಷಣ ಸಂಸ್ಥೆಗಳಲ್ಲಿ ಜೂ. 21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಅಂತಾರಾಷ್ಟ್ರೀಯ ಯೋಗಪಟು ಅಶೋಕ್ ಜೋಡುರಸ್ತೆ ಮಾತನಾಡಿ, ಯೋಗದ ಮಹತ್ವ ಹಾಗೂ ಅದನ್ನು ದೈನಂದಿನ ಜೀವನದಲ್ಲಿ ಹೇಗೆ ಅಳವಡಿಸಿಕೊಳ್ಳಬೇಕು ಎಂಬುದನ್ನು ತಿಳಿಸಿದರು. ಸಂಸ್ಥೆಯ ಹಿರಿಯ ವಿದ್ಯಾರ್ಥಿ ರಾಜ್ಯಮಟ್ಟದ ಯೋಗಪಟು ನಿಖಿಲ್ ಪೂಜಾರಿ ಯೋಗ ಪ್ರಾತ್ಯಕ್ಷಿಕೆಗಳನ್ನು ನೀಡಿದರು. ಸಂಸ್ಥೆಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು ಯೋಗದ ವಿವಿಧ ಆಸನಗಳನ್ನು ಪ್ರದರ್ಶಿಸಿದರು. ಈ ಸಂದರ್ಭ ಮುಖ್ಯ ಶಿಕ್ಷಕರಾದ ಪ್ರೌಢಶಾಲಾ ವಿಭಾಗದ ಡೊಮಿನಿಕ್ ಅಂದ್ರಾದೆ, ಪ್ರಾಥಮಿಕ ವಿಭಾಗದ ರುಡಾಲ್ಫ್ ಕಿಶೋರ್ ಲೋಬೊ, ದೈಹಿಕ ಶಿಕ್ಷಣ ಶಿಕ್ಷಕರಾದ ಕೃಷ್ಣಪ್ರಸಾದ್, ಪ್ರಕಾಶ್ ನಾಯ್ಕ್ ಹಾಗೂ ಲಾವಣ್ಯ ಉಪಸ್ಥಿತರಿದ್ದರು. ಶಿಕ್ಷಕಿ ಆ್ಯಲಿಸ್ ಲೋಬೊ ಕಾರ್ಯಕ್ರಮ ನಿರ್ವಹಿಸಿದರು.











































































error: Content is protected !!
Scroll to Top