ಸರಕಾರದ ವಿರುದ್ಧವೇ ಚುನಾವಣಾ ಆಯೋಗದಿಂದ ನ್ಯಾಯಾಂಗ ನಿಂದನೆ ದಾವೆ

ಬೆಂಗಳೂರು: ರಾಜ್ಯ ಚುನಾವಣಾ ಆಯೋಗ ಸರ್ಕಾರದ ವಿರುದ್ಧವೇ ನ್ಯಾಯಾಂಗ ನಿಂದನೆ ದಾವೆ ಹೂಡಿದೆ. ನ್ಯಾಯಾಲಯಕ್ಕೆ ನೀಡಿದ್ದ ಭರವಸೆಯಂತೆ ರಾಜ್ಯ ಸರ್ಕಾರ ನಿಗದಿತ ಅವಧಿಯಲ್ಲಿ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳಲ್ಲಿ ಮೀಸಲಾತಿ ಅಂತಿಮಗೊಳಿಸದ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್​ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ. ಈ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್​.ವಿ ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠ ಜು.11ಕ್ಕೆ ಮುಂದೂಡಿದೆ.
ಈ ಹಿಂದೆ ಸರ್ಕಾರ ನ್ಯಾಯಾಲಯಕ್ಕೆ ನೀಡಿದ್ದ ಭರವಸೆಯಂತೆ ನಿಗದಿತ ಅವಧಿಯಲ್ಲಿ ಜಿಲ್ಲಾ ಪಂಚಾಯತ್​ ಮತ್ತು ತಾಲೂಕು ಪಂಚಾಯತ್​ ಚುನಾವಣೆಗೆ ಮೀಸಲಾತಿ ಅಂತಿಮಗೊಳಿಸಿಲ್ಲ. ಇದರಿಂದ ಸರ್ಕಾರದ ವಿರುದ್ಧ ನ್ಯಾಯಂಗ ನಿಂದನೆ ಅರ್ಜಿ ಸಲ್ಲಿಸಲಾಗಿದೆ ಎಂದು ಚುನಾವಣಾ ಆಯೋಗ ಅರ್ಜಿಯಲ್ಲಿ ಹೇಳಿದೆ.
ಅವಧಿ ಮುಗಿದ ಜಿಲ್ಲಾ ಪಂಚಾಯತ್​, ತಾಲೂಕು ಪಂಚಾಯತ್​ಗೆ ಚುನಾವಣೆ ನಡೆಸಲು ಕೋರಿ ಚುನಾವಣಾ ಆಯೋಗ ಈ ಹಿಂದೆ ನ್ಯಾಯಾಲಯದಲ್ಲಿ ಪಿಐಎಲ್​ ಸಲ್ಲಿಸಿತ್ತು. ಅರ್ಜಿಯಲ್ಲಿ ಕ್ಷೇತ್ರ ಮರುವಿಂಗಡಣೆಗೆ ಸರ್ಕಾರ ಆಯೋಗ ರಚಿಸಿರುವುದನ್ನೂ ಪ್ರಶ್ನಿಸಿತ್ತು. ಈ ಅರ್ಜಿ ವಿಚಾರಣೆ ವೇಳೆ ರಾಜ್ಯ ಸರ್ಕಾರ 2023ರ ಡಿಸೆಂಬರ್​ 19ರಂದು ಪುನರ್​​ವಿಂಗಡೆ ಅಧಿಸೂಚನೆ ಹೊರಡಿಸುವುದಾಗಿ ಹೇಳಿತ್ತು. ಸರ್ಕಾರದ ಹೇಳಿಕೆ ಪರಿಗಣಿಸಿ ಹೈಕೋರ್ಟ್​ ಅರ್ಜಿ ಇತ್ಯರ್ಥಪಡಿಸಿತ್ತು. ಆದರೆ ಸರ್ಕಾರ ತಾನು ಹೇಳಿದಂತೆ ನಡೆದುಕೊಂಡಿಲ್ಲ ಎಂದು ಚುನಾವಣಾ ಆಯೋಗ ಇದೀಗ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ.





























































































































error: Content is protected !!
Scroll to Top