ಮಾಜಿ ಸಂಸದ ಅನಂತ್‌ ಕುಮಾರ್‌ ಮನೆಯಲ್ಲಿ ಅಗ್ನಿ ಅವಘಡ

ಕಾರವಾರ: ಮಾಜಿ ಸಂಸದ ಅನಂತ್ ಕುಮಾರ್ ಹೆಗ್ಡೆ ಮನೆಯಲ್ಲಿ ಇಂದು ಮುಂಜಾನೆ ಅಗ್ನಿ ಅವಘಡ ಸಂಭವಿಸಿದೆ. ಶಿರಸಿಯ ಕೆಎಚ್‌ಬಿ ಕಾಲೋನಿಯಲ್ಲಿ ಇರುವ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ‌ ಅನಾಹುತ ಸಂಭವಿಸಿದೆ. ಮನೆಯ ಮೇಲ್ಭಾಗದ ಜಿಮ್ ಮಾಡುವ ಕೊಠಡಿಯಲ್ಲಿ ಶಾರ್ಟ್‌ ಸರ್ಕ್ಯೂಟ್‌ ಆಗಿದೆ. ಬೆಂಕಿಯ ಕೆನ್ನಾಲಿಗೆಗೆ ಲಕ್ಷಾಂತರ ಮೌಲ್ಯದ ಜಿಮ್ ವಸ್ತುಗಳು ನಾಶವಾಗಿವೆ. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.



























































































































error: Content is protected !!
Scroll to Top