ವಾಲ್ಮೀಕಿ ನಿಗಮ ಹಗರಣ : ಇನ್ನೋರ್ವ ಆರೋಪಿ ಸೆರೆ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಸಂಭವಿಸಿರುವ ಬಹುಕೋಟಿ ರೂ. ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಎಸ್ಐಟಿ ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಸಾಯಿತೇಜ ಎಂಬಾತನ ಹೆಸರು ನಿಗಮದ ಅಧೀಕ್ಷಕ ಚಂದ್ರಶೇಖರನ್‌ ಆತ್ಮಹತ್ಯೆ ಮಾಡುವ ಮೊದಲು ಬರೆದ ಡೆತ್​​ನೋಟ್​​​ನಲ್ಲಿ ಇತ್ತು. ಈ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ಸಾಯಿತೇಜನನ್ನು ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದಾರೆ.
ಆತನ ಬಳಿ ಹಣಕಾಸು ವರ್ಗಾವಣೆ ಸಂಬಂಧದ ಕೆಲವು ಮಹತ್ವದ ದಾಖಲೆಗಳು ಪತ್ತೆಯಾಗಿವೆ ಎಂದು ತಿಳಿಬಂದಿದೆ. ಆತ್ಮಹತ್ಯೆಗೆ ಶರಣಾದ ನಿಗಮದ ಅಧಿಕಾರಿ ಚಂದ್ರಶೇಖರನ್ ಬರೆದಿದ್ದ ಡೆತ್‌ನೋಟ್‌ನಲ್ಲಿ ಸಾಯಿತೇಜನ ಹೆಸರು ಉಲ್ಲೇಖಿಸಿದ್ದರು. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಸಾಯಿತೇಜನನ್ನು ವಶಕ್ಕೆ ಪಡೆದಿದ್ದಾರೆ.

ಸಾಯಿತೇಜ್​​​ನನ್ನು ಎಸ್‌ಐಟಿ ಅಧಿಕಾರಿಗಳು ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಿ ವಶಕ್ಕೆ ಪಡೆದು ವಿಚಾರಣೆ ನಡೆಸಲಿದ್ದಾರೆ. ಸಾಯಿತೇಜ ಈ ಹಿಂದೆ ಬಂಧಿಸಲ್ಪಟ್ಟ ಸತ್ಯನಾರಾಯಣ ವರ್ಮಾನ ಸಹಚರನಾಗಿದ್ದು, ಹೈದರಾಬಾದ್​ನ ಕೋ-ಆಪರೇಟಿವ್ ಬ್ಯಾಂಕ್‌ವೊಂದರಲ್ಲಿ ನಕಲಿ ಖಾತೆ ತೆರೆಯುವಲ್ಲಿ ಈ ಇಬ್ಬರದ್ದು ಪ್ರಮುಖ ಪಾತ್ರವಿದೆ ಎಂಬ ಆರೋಪ ಕೇಳಿಬಂದಿದೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.





























































































































error: Content is protected !!
Scroll to Top