ಉಡುಪಿ : ನೇಜಾರು ಸಮೀಪದ ತೃಪ್ತಿನಗರದಲ್ಲಿ 2023 ನವೆಂಬರ್ 12 ರಂದು ಗಗನಸಖಿ ಸೇರಿ ಒಂದೇ ಕುಟುಂಬದ ನಾಲ್ವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ದಾರುಣ ಘಟನೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಅರುಣ್ ಚೌಗುಲೆ ಜಾಮೀನು ಅರ್ಜಿಯನ್ನು ವಜಾ ಮಾಡಲಾಗಿದೆ. ನ್ಯಾಯಮೂರ್ತಿ ಎಂ.ಜಿ. ಉಮಾ ಅವರಿದ್ದ ಹೈಕೋರ್ಟ್ ಪೀಠ ಆದೇಶಿಸಿದೆ.
ಮಲ್ಪೆ ಠಾಣೆಯ ನೇಜಾರು ಎಂಬಲ್ಲಿ ಆರೋಪಿ ಪ್ರವೀಣ್ ಅರುಣ್ ಚೌಗುಲೆ ಒಂದೇ ಕುಟುಂಬದವರಾದ ಐನಾಜ್, ಹಸೀನಾ, ಅಫ್ನಾನ್ ಹಾಗೂ ಅಸೀಮ್ ಎಂಬುವರರನ್ನ ಹತ್ಯೆ ನಡೆಸಿದ್ದ. ಈ ಕುರಿತು ಸಾಂದರ್ಭಿಕ ಸಾಕ್ಷಿ, ಸಿಸಿಟಿವಿ ದೃಶ್ಯ, ಆರೋಪಿ ಕೂದಲಿನ DNA ಆಧರಿಸಿ ಹೆಚ್ಚುವರಿ ಎಸ್ಪಿಪಿ ಬಿ.ಎನ್. ಜಗದೀಶ್ ಅವರು ಜೂ. 27ರಂದು ಮಂಡಿಸಿದ್ದರು. ಅದರಂತೆ ಆರೋಪಿಯ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
























