ಕಾರ್ಕಳ : ತೋಟಗಾರಿಕಾ ಇಲಾಖೆಯ ವತಿಯಿಂದ ರೈತರ ಹಾಗೂ ಸಾರ್ವಜನಿಕರ ಬೇಡಿಕೆ ಆಧಾರದ ಮೇಲೆ ವಿವಿಧ ತೋಟಗಾರಿಕೆ ಕಸಿ ಹಾಗೂ ಸಸಿ ಗಿಡಗಳನ್ನು ಇಲಾಖಾ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಕಾರ್ಕಳ ತಾಲೂಕಿನ ರಾಮಸಮುದ್ರ ಹಾಗೂ ಕುಕ್ಕುಂದೂರು ತೋಟಗಾರಿಕೆಯಲ್ಲಿ ಉತ್ತಮ ಗುಣಮಟ್ಟದ ಅಡಿಕೆ (ರೂ. 25), ಕಸಿ ಗೇರು (ರೂ. 32), ಕಾಳುಮೆಣಸು (ರೂ. 11) ಹಾಗೂ ತೆಂಗು (ರೂ. 75) ಸಸಿಗಳನ್ನು ವಿತರಿಸಲಾಗುತ್ತಿದೆ. ಹೆಚ್ಚಿನ ಮಾಹಿತಿಗಾಗಿ ತಾಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು ( 7892326323, 7996394553) ಸಂಪರ್ಕಿಸಬಹುದಾಗಿದೆ.
ತೋಟಗಾರಿಕಾ ಇಲಾಖೆಯಲ್ಲಿ ಅಡಿಕೆ, ಕಸಿ ಗೇರು, ಕಾಳುಮೆಣಸು ಸಸಿಗಳು ಲಭ್ಯ





































