ರಸ್ತೆ ಬದಿ ನಿಲ್ಲಿಸಿದ್ದ ಕಾರು ಬೆಂಕಿಗಾಹುತಿ

ಉಡುಪಿ: ರಸ್ತೆ ಬದಿ ನಿಲ್ಲಿಸಿದ್ದ ಮಾರುತಿ ರಿಟ್ಜ್ ಕಾರು ಬೆಂಕಿಗಾಹುತಿಯಾಗಿ ಸಂಭವನೀಯ ಅನಾಹುತವೊಂದು ತಪ್ಪಿದ ಘಟನೆ ಮಣಿಪಾಲದ ಬಬ್ಬುಸ್ವಾಮಿ ದೈವಸ್ಥಾನದ ಎದುರು ತಡರಾತ್ರಿ ನಡೆದಿದೆ.
ಕಾರು ಚಾಲಕ ಸೇರಿ ಇನ್ನೋರ್ವ ವ್ಯಕ್ತಿ ಕಾರನ್ನು ರಸ್ತೆ ಬದಿ ನಿಲ್ಲಿಸಿ ಅದರೊಳಗೆ ಮಲಗಿದ್ದರು. ಈ ವೇಳೆ ಕಾರು ಚಾಲಕನಿಗೆ ಕಾರಿನ ಬಾನೆಟ್‌ಬಲ್ಲಿ ಹೊಗೆ ಕಾಣಿಸಿಕೊಂಡಿದ್ದು, ಕಾರಿನಿಂದ ಹೊರಬಂದಿದ್ದಾರೆ. ಬೆಂಕಿಯ ಕೆನ್ನಾಲೆಗೆ ಕಾರು ಸಂಪೂರ್ಣ ಸುಟ್ಟುಹೋಗಿದ್ದು, ಶಾರ್ಟ್ ಸರ್ಕ್ಯೂಟ್‌ನಿಂದ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಕಾರು ಮಾಲೀಕನ ಮಾಹಿತಿ ಮೇರೆಗೆ ಅಗ್ನಿ ಶಾಮಕ ದಳದವರು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ಹಿಮ್ಮುಖವಾಗಿ ಚಲಿಸಲಾರಂಭಿಸಿದ ಕಾರು ಗಾಳಿಮಳೆಗೆ ಮುರಿದು ಬಿದ್ದಿದ್ದ ಮರದ ಗೆಲ್ಲೊಂದು ಅಡ್ಡ ಸಿಕ್ಕಿದ ಕಾರಣ ನಿಂತಿದೆ. ಇಲ್ಲದಿದ್ದರೆ ಚಲಿಸಿಕೊಂಡು ಇನ್ನಷ್ಟು ದೂರ ಹೋಗುವ ಸಾಧ್ಯತೆಯಿತ್ತು.











































































error: Content is protected !!
Scroll to Top