ಸಿ.ಡಿ. ಫ್ಯಾಕ್ಟರಿ ಬಂದ್‌ ಮುಡಾ ಫ್ಯಾಕ್ಟರಿ ಓಪನ್‌ : ಕುಮಾರಸ್ವಾಮಿ

ಮೈಸೂರು: ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲಾಗಿದೆ. ಸಿಡಿ ಫ್ಯಾಕ್ಟರಿ ಬಂದ್‌ ಮಾಡಿ ಮುಡಾ ಫ್ಯಾಕ್ಟರಿ ತೆರೆದಿದ್ದಾರೆ ಎಂದು ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ ಕುಮಾರಸ್ವಾಮಿ ಬಾಂಬ್‌ ಸಿಡಿಸಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸೈಟ್‌ ಹಗರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇಷ್ಟು ದಿನ ಹೊರಗೆ ಬಾರದ ಹಗರಣ ಈಗ ಬಂದಿದ್ದು ಹೇಗೆ? ಇದರ ಹಿಂದೆ ಸಿಎಂ ಖುರ್ಚಿ ಮೇಲೆ ಟವಲ್ ಹಾಕಿರುವವರ ಪಾತ್ರ ಇದೆ. ಸಿಡಿ ಫ್ಯಾಕ್ಟರಿ ಬಂದ್ ಆಯ್ತು ಮುಡಾ ಫ್ಯಾಕ್ಟರಿ ಶುರುವಾಯಿತು ಎಂದು ಹೇಳಿದರು.
ಬಿಜೆಪಿಯವರು ಅಕ್ರಮದ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಆದರೆ ಹಗರಣ ಹೊರಗಡೆ ಬರಲು ಕಾಂಗ್ರೆಸ್‌ನವರೇ ಒಳಗಡೆ ಕುಮ್ಮಕ್ಕು ನೀಡುತ್ತಿದ್ದಾರೆ. ಈ ಬಗ್ಗೆ ನನಗೆ ಮಾಹಿತಿ ಇದೆ. ಸಿಎಂ ಸಿದ್ದರಾಮಯ್ಯ ಪತ್ನಿಗೆ ೧೪ ಸೈಟ್‌ ಹೇಗೆ ಬಂತು ಅಂತಲೂ ನನಗೆ ಗೊತ್ತಿದೆ. 62 ಕೋಟಿ ರೂ. ಪರಿಹಾರ ಕೇಳುವ ಸಿಎಂ ಭೂಮಿ ಕಳೆದುಕೊಂಡು ಬೀದಿಯಲ್ಲಿ ನಿಂತಿರುವ ರೈತರಿಗೂ ಪರಿಹಾರ ಕೊಡಿಸಲಿ ಎಂದು ಸವಾಲು ಹಾಕಿದರು.
ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಈಗ ಶಾಸಕರಾಗಿದ್ದಾರೆ. ಅವರು ಸಿಎಂ ಪರ ಸುದೀರ್ಘವಾಗಿ ಮಾತನಾಡಿ 62 ಕೋಟಿ ರೂ. ಪರಿಹಾರ ನೀಡಬೇಕು ಎಂದಿದ್ದಾರೆ. ಹಲವು ಕಡೆ ಅಭಿವೃದ್ಧಿ ಹೆಸರಿನಲ್ಲಿ ಭೂ ಸ್ವಾಧೀನವಾಗಿದ್ದರೂ ಆ ರೈತರು ಇನ್ನೂ ಕೂಡ ಬೀದಿಯಲ್ಲಿ ಅಲೆದಾಡುತ್ತಿದ್ದಾರೆ. ಅವರ ಜಾಗಕ್ಕೆ ದರ ನಿಗದಿ ಮಾಡುವಾಗ ಹೀಗೆ ಮಾಡುತ್ತೀರಾ? ರೈತರನ್ನ ಬೀದಿಗೆ ನಿಲ್ಲಿಸಿದ್ದೀರಿ ಇದು ಸರಿಯೇ? ನಿಮ್ಮ ಪತ್ನಿಯ ಹಣ ಕೇಳುತ್ತಿದ್ದೀರಲ್ಲ. ಆ ದೇವರು ಮೆಚ್ಚುತ್ತಾನಾ ಎಂದು ಪ್ರಶ್ನಿಸಿದರು.















































error: Content is protected !!
Scroll to Top