ಮಂಗಳೂರು : ವಕೀಲರಾದ ಡಾ. ಅಕ್ಷತಾ ಆದರ್ಶ್ ಅವರು ಬರೆದಿರುವ ಕಾನೂನು ಮಾಹಿತಿಯುಳ್ಳ ಸರಳ ಕಾನೂನುಗಳ ಅರಿವಿಲ್ಲದೆ ಮೋಸ ಹೋಗದಿರಿ! ಪುಸ್ತಕದ ಲೋಕರ್ಪಣಾ ಕಾರ್ಯಕ್ರಮ ಮಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯ ಸಭಾಂಗಣದಲ್ಲಿ ಜು. 7ರಂದು ಬೆಳಗ್ಗೆ 10.15 ಕ್ಕೆ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಡೆಯವರು ಪುಸ್ತಕ ಲೋಕಾರ್ಪಣೆ ಮಾಡಲಿರುವರು. ಮುಖ್ಯ ಅತಿಥಿಗಳಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಹಾಗೂ ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಹೆಚ್. ವಿ. ರಾಘವೇಂದ್ರ ಭಾಗಿಯಾಗಲಿದ್ದಾರೆ ಎಂದು ಆಯೋಜಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.



































