ಕಾರ್ಕಳ : ವೃದ್ಧೆಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜು. 5ರಂದು ಕೌಡೂರು ಗ್ರಾಮದಲ್ಲಿ ಸಂಭವಿಸಿದೆ. ರತ್ನ(85) ಆತ್ಮಹತ್ಯೆಗೆ ಶರಣಾದವರು. ಇವರು ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದು, ಇದೇ ವಿಚಾರವಾಗಿ ಮನನೊಂದು ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಗ ದಯಾನಂದ ಅವರು ನೀಡಿದ ಮಾಹಿತಿಯಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಕೌಡೂರು : ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ































