ಅಂಗನವಾಡಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅಂಗನವಾಡಿಗಳಲ್ಲಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳಿಗೆ ಆನ್​ಲೈನ್​​ನಲ್ಲಿ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುವುದು. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಮುಗಿಸಿದ ಮಹಿಳೆಯರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವೆಬ್‌ಸೈಟ್‌ನಲ್ಲಿ ಖಾಲಿ ಹುದ್ದೆಗಳು ಲಭ್ಯವಿರುವ ಜಿಲ್ಲೆ, ತಾಲೂಕು, ಅಧಿಸೂಚನೆ ಸಂಖ್ಯೆ, ಹುದ್ದೆಗಳ ಸಂಖ್ಯೆ ಆಯ್ಕೆ ಮಾಡಿಕೊಂಡು ಆನ್‌ಲೈನ್ ಅರ್ಜಿಯನ್ನು ಸರಿಯಾಗಿ ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು. ನಂತರ ಫಾರ್ಮನ್ನು ಡೌನ್​​ಲೋಡ್ ಮಾಡಿಟ್ಟುಕೊಳ್ಳಬೇಕು.

ಶೈಕ್ಷಣಿಕ ಅರ್ಹತೆ

ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಕನಿಷ್ಠ ಪಿಯುಸಿ ತೇರ್ಗಡೆ ಹೊಂದಿರಬೇಕು. ಎಸ್‌ಎಸ್‌ಎಲ್‌ಸಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯವಾಗಿ ಅಧ್ಯಯನ ಮಾಡಿರಬೇಕು. ಸಹಾಯಕಿ ಹುದ್ದೆಗೆ ಕನಿಷ್ಠ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ತರಗತಿಯಲ್ಲಿ ತೇರ್ಗಡೆ ಹೊಂದಿರಬೇಕು. ಎಸ್‌ಎಸ್‌ಎಲ್‌ಸಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಓದಿರಬೇಕು.

ವಯೋಮಿತಿ

ಕನಿಷ್ಠ 19 ವರ್ಷಗಳಿಂದ ಗರಿಷ್ಠ 35 ವರ್ಷದೊಳಗಿನ ಮಹಿಳೆಯರು ಅರ್ಜಿ ಸಲ್ಲಿಸಬಹುದು.

ಬೇಕಾಗುವ ದಾಖಲೆಗಳು

ಅರ್ಜಿ ನಮೂನೆ ಜನನ ಪತ್ರ ಜನ್ಮ ದಿನಾಂಕ ಇರುವ ಪಿಯುಸಿ ಅಥವಾ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ವಾಸಸ್ಥಳ ದೃಢೀಕರಣ ಪತ್ರ, ಜಾತಿ ಪ್ರಮಾಣಪತ್ರ, ರೇಷನ್ ಕಾರ್ಡ್, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ.

































































































error: Content is protected !!
Scroll to Top