ಸಿಎ ಫೌಂಡೇಶನ್ ಫಲಿತಾಂಶ : ಕ್ರಿಯೇಟಿವ್ ಕಾಲೇಜು ವಿದ್ಯಾರ್ಥಿಗಳ ಸಾಧನೆ

ಕಾರ್ಕಳ : ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್‌ ಅಕೌಂಟೆಂಟ್ ಆಫ್ ಇಂಡಿಯಾ ಸಂಸ್ಥೆಯವರು ನಡೆಸಿದ ಸಿಎ ಫೌಂಡೇಶನ್ ಪರೀಕ್ಷೆಯ ಫಲಿತಾಂಶ ಜು. 29 ರಂದು ಪ್ರಕಟಗೊಂಡಿದ್ದು, ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಐವರು ವಿದ್ಯಾರ್ಥಿಗಳು ಗಮನಾರ್ಹ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಕೆ.ವಿ ಮೌರ್ಯ (273), ಭಕ್ತಿ ಕಾಮತ್(253), ಸುಪ್ರೀತ್ ಎಸ್. ಹೆಗ್ಡೆ (248), ವಿನಯ್ ಪ್ರಶಾಂತ ಹಿರೇಮಠ (238) ಹಾಗೂ ಸಾನ್ವಿ (223) ಅಂಕ ಪಡೆದಿದ್ದಾರೆ.
ಸಾಧಕ ವಿದ್ಯಾರ್ಥಿಗಳನ್ನು ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಬೋಧಕೇತರ ಸಿಬ್ಬಂದಿ ಹಾಗೂ ಪರೀಕ್ಷಾ ಸಂಯೋಜಕ ರಾಘವೇಂದ್ರ ಬಿ. ರಾವ್ ಅಭಿನಂದಿಸಿದ್ದಾರೆ.











































































error: Content is protected !!
Scroll to Top