ಕಾರ್ಕಳ : ಶಿಕ್ಷಣದಿಂದ ವ್ಯಕ್ತಿತ್ವ ರೂಪಗೊಳ್ಳಬೇಕು, ಆದರೆ ಪ್ರಸ್ತುತ ಕಾಲಘಟ್ಟದಲ್ಲಿ ಶಿಕ್ಷಣ ಉದ್ಯಮವಾಗಿ ಬದಲಾಗುತ್ತಿದೆ. ಇಂತಹ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಮಾನವೀಯತೆಯನ್ನು ಬೆಳೆಸುವಂತಹ ಶಿಕ್ಷಣವನ್ನು ನೀಡುವ ಅನಿವಾರ್ಯತೆ ಇದೆ. ಹಾಗಾಗಿ ವಿದ್ಯಾರ್ಥಿಗಳು ಸಾಹಿತ್ಯದ ಓದಿನತ್ತ ಒಲವು ತೋರಬೇಕಾಗಿದೆ ಎಂದು ಕಾರ್ಕಳ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ ಶೆಟ್ಟಿ ಹೇಳಿದರು.
ಕಾರ್ಕಳದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ನಡೆದ ಸಾಹಿತ್ಯ ಸಂಘದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಕಾಲೇಜಿನ ಹಿರಿಯ ಉಪನ್ಯಾಸಕಿ ಫ್ಯಾನಿ ಜೋಯ್ಸ್ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಜನಾರ್ದನ್ ಇಡ್ಯಾ, ಕಾಲೇಜು ಅಭಿವೃದ್ಧಿ ಸಮಿತಿಯ ಕೋಶಾಧಿಕಾರಿ ನಿತ್ಯಾನಂದ ಪೈ, ವಿದ್ಯಾರ್ಥಿ ನಾಯಕ ಹುಲಿಗೇಶ್ ಮತ್ತು ಸಾಹಿತ್ಯ ಸಂಘದ ಪ್ರತಿನಿಧಿ ಶ್ರಾವ್ಯ ಉಪಸ್ಥಿತರಿದ್ದರು.
ಸಮಾಜಶಾಸ್ತ್ರ ಉಪನ್ಯಾಸಕಿ ಶಾಲಿನಿ ನಿರೂಪಿಸಿ, ಸಂಸ್ಕೃತ ಉಪನ್ಯಾಸಕಿ ಶಾಂತೇರಿ ದಾಮೋದರ ಪೈ ಸ್ವಾಗತಿಸಿದರು. ಕನ್ನಡ ಉಪನ್ಯಾಸಕ ರಂಜಿತ್ ಕುಮಾರ್ ವಂದನಾರ್ಪಣೆ ಮಾಡಿದರು.
ಮಾನವೀಯತೆ ಬೆಳೆಸುವ ಶಿಕ್ಷಣ ಅಗತ್ಯ : ಕೊಂಡಳ್ಳಿ ಪ್ರಭಾಕರ ಶೆಟ್ಟಿ






































