ಗುಡ್ಡ ಕುಸಿತ : ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್

ಮಂಗಳೂರು : ಪುತ್ತೂರು ಸಮೀಪ ಗುಡ್ಡ ಕುಸಿದ ಪರಿಣಾಮ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದೆ. ಮಣ್ಣು ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದ್ದು, ಮಧ್ಯಾಹ್ನದೊಳಗೆ ಸಂಚಾರಕ್ಕೆ ರಸ್ತೆ ತೆರವಾಗಬಹುದು ಎನ್ನಲಾಗಿದೆ. ಪುತ್ತೂರಿನ ಬೈಪಾಸ್ ರಸ್ತೆಯ ತೆಂಕಿಲ ಎಂಬಲ್ಲಿ ಹೆದ್ದಾರಿ ಮೇಲೆ ಶುಕ್ರವಾರ ಮುಂಜಾನೆ ಗುಡ್ಡ ಕುಸಿದು ಬಿದ್ದಿದೆ. ಪರಿಣಾಮವಾಗಿ ರಸ್ತೆ ಸಂಪರ್ಕ ಕಡಿತಗೊಂಡಿದೆ. ಮಡಿಕೇರಿ ಹಾಗೂ ಮೈಸೂರು ಕಡೆಗೆ ಪ್ರಯಾಣಿಸುವವರಿಗೆ ಬದಲಿ ರಸ್ತೆಯಾಗಿ ಪುತ್ತೂರು ಸಿಟಿ ಮೂಲಕ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.
ನಸುಕಿನ ಜಾವ ಯಾವುದೇ ವಾಹನ ಸಂಚಾರ ಇಲ್ಲದ ಸಮಯ ಗುಡ್ಡ ಕುಸಿತವಾಗಿದ್ದರಿಂದ ಭಾರಿ ಅನಾಹುತ ತಪ್ಪಿದೆ. ಹೆದ್ದಾರಿ ಮೇಲೆ ಬಿದ್ದಿರುವ ಮಣ್ಣು ತೆರವು ಮಾಡುವ ಕಾರ್ಯಾಚರಣೆ ನಡೆಯುತ್ತಿದೆ.

ಮಂಗಳೂರು-ಬೆಂಗಳೂರು ಮಧ್ಯೆ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟ್​​ನಲ್ಲಿ ಗುಡ್ಡ ಕುಸಿತದಿಂದ ಸಂಚಾರ ದುಸ್ತರವಾಗಿದೆ. ಮತ್ತೊಂದೆಡೆ, ಚಾರ್ಮಾಡಿ ಘಾಟ್ ರಸ್ತೆಯಲ್ಲಿಯೂ ಅಲ್ಲಲ್ಲಿ ಭೂಕುಸಿತವಾಗುತ್ತಿದೆ. ಹೀಗಾಗಿ ವಾಹನಗಳು ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಪಾಜೆ ಘಾಟಿಯ ಮೂಲಕ ಮಡಿಕೇರಿ, ಮೈಸೂರು ಮಾರ್ಗಾವಗಿ ಬೆಂಗಳುರಿಗೆ ಹೋಗುತ್ತಿದ್ದವು. ಈಗ ಭೂಕುಸಿತವಾಗಿ ಈ ಮಾರ್ಗವೂ ಬಂದ್‌ ಆಗಿದೆ.
ಕಳೆದ ಕೆಲವು ದಿನಗಳಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಅನೇಕ ಅನಾಹುತಗಳನ್ನು ಸೃಷ್ಟಿಸಿದೆ. ವಿಪತ್ತು ನಿರ್ವಹಣಾ ಪ್ರಾಧಿಕಾರ ಮುನ್ನೆಚ್ಚರಿಕೆಗಳನ್ನು ವಹಿಸಿದೆ.









































































































error: Content is protected !!
Scroll to Top