ಆ. 11 : ಕಾರ್ಕಳ ತಾಲೂಕು ಭಜನಾ ಮಂಡಳಿಗಳ ಒಕ್ಕೂಟದ ಪದಗ್ರಹಣ – ಭಜನಾ ಕಮ್ಮಟ

ಕಾರ್ಕಳ : ಕಾರ್ಕಳ ತಾಲೂಕು ಭಜನಾ ಮಂಡಳಿಗಳ ಒಕ್ಕೂಟದ ನೇತೃತ್ವದಲ್ಲಿ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಕಾರ್ಕಳ ಇವರ ಸಹಕಾರದೊಂದಿಗೆ ಉಡುಪಿ ಜಿಲ್ಲಾ ಭಜನಾ ಮಂಡಳಿಗಳ ಒಕ್ಕೂಟದ ಗೌರವಾಧ್ಯಕ್ಷ ನಾಡೋಜ ಡಾ. ಜಿ. ಶಂಕರ್‌ರವರ ಮಾರ್ಗದರ್ಶನದಲ್ಲಿ ಭಜನಾ ಮಂಡಳಿಗಳ ಒಕ್ಕೂಟದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಭಜನಾ ಕಮ್ಮಟ ಆ. 11ರಂದು ಬೆಳಿಗ್ಗೆ 9 ಗಂಟೆಯಿಂದ ಕಾರ್ಕಳದಲ್ಲಿ ಬಾಹುಬಲಿ ಪ್ರವಚನ ಮಂದಿರದಲ್ಲಿ ನಡೆಯಲಿದೆ.

ಬೆಳಿಗ್ಗೆ 9 ಗಂಟೆಯಿಂದ ನಗರ ಭಜನಾ ದರ್ಶನ – ಕಾರ್ಕಳ ಮಾರಿಗುಡಿಯಿಂದ ಬಾಹುಬಲಿ ಪ್ರವಚನ ಮಂದಿರದವರೆಗೆ ಭಜನಾ ಮೆರವಣಿಗೆ ನಡೆಯಲಿದೆ. 11 ಗಂಟೆಯಿಂದ ಭಜನಾ ಕಮ್ಮಟ -ಯೋಗೀಶ್ ಕಿಣಿ ಇವರಿಂದ ಭಜನಾ ಗಾಯನ ತರಬೇತಿ, ಮಧ್ಯಾಹ್ನ 2 ಗಂಟೆಯಿಂದ ಕುಣಿತ ಭಜನಾ ತರಬೇತಿ – ಸಂಪನ್ಮೂಲ ವ್ಯಕ್ತಿಯಾಗಿ ರಮೇಶ್ ಕಲ್ಮಾಡಿ ಭಾಗವಹಿಸಲಿದ್ದಾರೆ.

ಸಭಾ ಕಾರ್ಯಕ್ರಮ
ಬೆಳಿಗ್ಗೆ 10 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಶಾಸಕ ವಿ. ಸುನಿಲ್ ಕುಮಾರ್ ಉದ್ಘಾಟಿಸಲಿದ್ದಾರೆ. ಕಾರ್ಕಳ ತಾಲೂಕು ಭಜನಾ ಮಂಡಳಿಗಳ ಒಕ್ಕೂಟದ ಅಧ್ಯಕ್ಷ ಶ್ರೀಕಾಂತ್ ಪ್ರಭು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಕ್ವಾರಿ ಮತ್ತು ಕ್ರಷರ್ಸ್ ಅಸೋಸಿಯೇಶನ್ ರಾಜ್ಯಾಧ್ಯಕ್ಷ ಡಾ। ರವೀಂದ್ರ ಶೆಟ್ಟಿ ಬಜಗೋಳಿ, ಲೆಕ್ಕ ಪರಿಶೋಧಕ ಕಮಲಾಕ್ಷ ಕಾಮತ್, ಬೋಳ ಗಾಯತ್ರಿ ಎಕ್ಸ್‌ಪೋರ್ಟ್‌ನ ಪ್ರಶಾಂತ್ ಕಾಮತ್, ನ್ಯಾಯವಾದಿ ಎಂ. ಕೆ. ವಿಜಯ್ ಕುಮಾರ್, ಉದ್ಯಮಿಗಳಾದ ಅರುಣ್ ಕುಮಾರ್ ನಿಟ್ಟೆ, ಅಶೋಕ್ ಅಡ್ಯಂತಾಯ, ಉಡುಪಿ ಜಿಲ್ಲಾ ಭಜನಾ ಮಂಡಳಿಗಳ ಒಕ್ಕೂಟದ ಅಧ್ಯಕ್ಷ ಬೋಜರಾಜ್ ಆರ್. ಕಿದಿಯೂರು, ಕರಾವಳಿ ಭಜನಾ ಸಂಸ್ಕಾರ ವೇದಿಕೆ ಮಂಗಳೂರು ಇದರ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ಪೂಜಾರಿ ಎರ್ಲಪಾಡಿ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಅಧ್ಯಕ್ಷ ಹರೀಶ್ ಹೆಗ್ಡೆ ಕಡ್ತಲ, ಪುರಸಭಾ ಸದಸ್ಯ ಪ್ರದೀಪ್ ರಾಣೆ,

ಸಮಾರೋಪ ಸಮಾರಂಭ
ಮಧ್ಯಾಹ್ನ 3.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಶ್ರೀಕಾಂತ್ ಪ್ರಭು ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಹಿರಿಯ ಭಜಕರಾದ ಕಮಲಾಕ್ಷ ನಾಯಕ್, ಕಾರ್ಕಳ ತಾಲೂಕು ಭಜನಾ ಮಂಡಳಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಶೈಲೇಶ್ ಸಾಣೂರು, ಕಾರ್ಕಳ ಶೌರ್ಯವಿಪತ್ತು ನಿರ್ವಾಹಣಾ ಘಟಕದ ಅಧ್ಯಕ್ಷ ಸದಾನಂದ ಸಾಲಿಯಾನ್, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಪ್ರಧಾನ ಕಾರ್ಯದರ್ಶಿ ಸುಕೇಶ್ ಸಾಣೂರು, ಕಾರ್ಕಳ ತಾಲೂಕು ಕರಾವಳಿ ಭಜನಾ ಸಂಸ್ಕಾರ ವೇದಿಕೆ ಅಧ್ಯಕ್ಷ ಗುರುಪ್ರಸಾದ್ ಕಡಾರಿ ಭಾಗವಹಿಸಲಿದ್ದಾರೆ ಎಂದು ಆಯೋಜಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.





























































































































error: Content is protected !!
Scroll to Top