ಮುಡಾರು : ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಆತ್ಮಹತ್ಯೆ

ಕಾರ್ಕಳ : ಅನಾರೋಗ್ಯದಿಂದ ಬೇಸತ್ತ ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಆ. 7ರಂದು ಮುಡಾರು ಗ್ರಾಮದಲ್ಲಿ ಸಂಭವಿಸಿದೆ. ಹರಿಪ್ರಸಾದ (30) ಆತ್ಮಹತ್ಯೆಗೆ ಶರಣಾದವರು. ಇವರು ಕಳೆದ ಒಂದು ವರ್ಷದಿಂದ ಎರಡು ಕಾಲು ನೊವಿನಿಂದ ಬಳಲುತ್ತಿದ್ದು, ಉಡುಪಿ ಅಜ್ಜರಕಾಡು ಜಿಲ್ಲಾ ಸರಕಾರಿ ಆಸ್ಪತ್ರೆ ಮತ್ತು ಮಂಗಳೂರು ಜಿಲ್ಲಾ ವೆನ್ಲಾಕ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜು. 20ರಂದು ಕಾಲು ಚಿಕಿತ್ಸೆಯ ಬಗ್ಗೆ ಕಾರ್ಕಳ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಆ. 5ರಂದು ಡಿಸ್ಚಾರ್ಜ್‌ ಆಗಿ ಮನೆಗೆ ಹಿಂದಿರುಗಿದ್ದರು. ಕಾಲುನೋವು ಗುಣಮುಖವಾಗದೇ ಇದ್ದುದರಿಂದ ಜೀವನದಲ್ಲಿ ಬೇಸತ್ತು ಆ. 7ರಂದು ತಮ್ಮ ಮನೆಯ ಎದುರುಗಡೆ ಇರುವ ಆವರಣವಿಲ್ಲದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.





























































































error: Content is protected !!
Scroll to Top