ಅಧ್ಯಕ್ಷರಾಗಿ ಸುರೇಂದ್ರ ಶೆಟ್ಟಿ – ಕಾರ್ಯದರ್ಶಿಯಾಗಿ ದೇವಿಪ್ರಸಾದ್ ಶೆಟ್ಟಿ
ಕಾರ್ಕಳ : ಬೆಳ್ಮಣ್ ಕಾರು ಮತ್ತು ಟೆಂಪೋ ಚಾಲಕ ಮಾಲಕರ ಸಂಘದ ನೂತನ ಅಧ್ಯಕ್ಷರಾಗಿ ಸುರೇಂದ್ರ ಶೆಟ್ಟಿ ಹಾಗೂ ಕಾರ್ಯದರ್ಶಿಯಾಗಿ ದೇವಿಪ್ರಸಾದ್ ಶೆಟ್ಟಿ ಅವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಬೆಳ್ಮಣ್ ವ್ಯವಸಾಯ ಸೇವಾ ಸಹಕಾರಿ ಸಂಘದ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಕಾರು ಮತ್ತು ಟೆಂಪೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.
ಸಭೆಯಲ್ಲಿ ವಾರ್ಷಿಕ ಲೆಕ್ಕಪತ್ರ ಮಂಡನೆ ಹಾಗೂ ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು. ಉಡುಪಿ ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಅಸೋಸಿಯೇಶನ್ ಪ್ರಧಾನ ಕಾರ್ಯದರ್ಶಿ ರಮೇಶ್ ಕೋಟ್ಯಾನ್, ಕಾರ್ಯದರ್ಶಿ ಕೃಷ್ಣ ಪೂಜಾರಿ ಹಾಗೂ ಬೆಳ್ಮಣ್ ವಲಯದ ಮಾಜಿ ಅಧ್ಯಕ್ಷ ವಲ್ಟಾರ್ ಡಿಸೋಜಾ, ಕಾರ್ಯದರ್ಶಿ ದಿನೇಶ್ ಕುಲಾಲ್ ಉಪಸ್ಥಿತರಿದ್ದರು. ಗಣೇಶ್ ದೇವಾಡಿಗ ಕಾರ್ಯಕ್ರಮ ನಿರ್ವಹಿಸಿದರು.





















