ಉಳ್ಳಾಲ : ಕೊಲೆ ಆರೋಪಿಯನ್ನು ಅಟ್ಟಾಡಿಸಿ ಕೊಂದ ಗ್ಯಾಂಗ್‌

ಮಂಗಳೂರು: ಕೊಲೆ ಪ್ರಕರಣದ ಆರೋಪಿಯನ್ನು ಗ್ಯಾಂಗೊಂದು ಅಟ್ಟಿಸಿಕೊಂಡು ಹೋಗಿ ಕೊಂದು ಹಾಕಿದ ಘಟನೆ ಭಾನುವಾರ ತಡರಾತ್ರಿ ಉಳ್ಳಾಲದಲ್ಲಿ ಸಂಭವಿಸಿದೆ. ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿ ಉಳ್ಳಾಲ ಕಡಪ್ಪುರ ನಿವಾಸಿ ಸಮೀರ್ (35) ಹತ್ಯೆಯಾದವನು. ಗತಂಡವೊಂದು ಅವನನ್ನು ಅಟ್ಟಾಡಿಸಿಕೊಂಡು ಹೋಗಿ ತಲವಾರಿನಿಂದ ಕಡಿದು ಭೀಕರವಾಗಿ ಹತ್ಯೆ ಮಾಡಿದೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ರಾ.ಹೆ.66ರ ಕಲ್ಲಾಪು ವಿ.ಕೆ.ಫರ್ನಿಚರ್ ಕಟ್ಟಡದ ಹಿಂಭಾಗದಲ್ಲಿ ತಡರಾತ್ರಿ ವೇಳೆ ಹತ್ಯೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಮೀರ್‌ ರಾತ್ರಿ ತಾಯಿ ಜೊತೆಗೆ ಕಲ್ಲಾಪುವಿನ ಹೋಟೆಲ್‌ಗೆ ಊಟಕ್ಕೆಂದು ಬಂದ ಸಂದರ್ಭ ಹಿಂಬದಿಯಿಂದ ಕಾರಿನಲ್ಲಿ ಹಿಂಬಾಲಿಸಿದ್ದ ತಂಡ ಸಮೀರ್ ಇಳಿಯುತ್ತಿದ್ದಂತೆ ತಲವಾರಿನಿಂದ ಕಡಿದು ಕೊಲೆಗೆ ಯತ್ನಿಸಿದೆ. ಅಪಾಯವನ್ನು ಅರಿತ ಸಮೀರ್ ತಕ್ಷಣ ಸ್ಥಳದಿಂದ ಓಡಲು ಯತ್ನಿಸಿದ್ದಾನೆ. ಈ ವೇಳೆ ಅಟ್ಟಾಡಿಸಿದ ಐದು ಮಂದಿಯ ತಂಡ ಕಲ್ಲಾಪು ಜಂಕ್ಷನ್ನಿನಿಂದ 500 ಮೀಟರ್‌ ದೂರದಲ್ಲಿರುವ ವಿ.ಕೆ.ಫರ್ನಿಚರ್ ಹಿಂಭಾಗದವರೆಗೂ ಅಟ್ಟಿಸಿಕೊಂಡು ಹೋಗಿ ಅಲ್ಲಿ ತಲವಾರಿನಿಂದ ಕಡಿದು ಹತ್ಯೆ ನಡೆಸಿದೆ.

2018ರಲ್ಲಿ ರೌಡಿಶೀಟರ್ ಟಾರ್ಗೆಟ್ ಇಲ್ಯಾಸ್‌ ಎಂಬಾತನನ್ನು ಜೆಪ್ಪುವಿನ ಫ್ಲಾಟ್‌ನಲ್ಲಿ ದಾವುದ್, ಶಮೀರ್, ರಿಯಾಝ್, ನಮೀರ್, ಅಬ್ದುಲ್ ಖಾದರ್, ಉಮ್ಮರ್ ನವಾಫ್, ಮೊಹಮ್ಮದ್ ನಝೀರ್, ನೌಷಾದ್, ಅಝ್ಗರ್ ಆಲಿ ಎಂಬವರು ಸೇರಿಕೊಂಡು ಹತ್ಯೆ ಮಾಡಿದ್ದರು. ಪ್ರಕರಣದಲ್ಲಿ ಶಮೀರ್ ಎರಡನೇ ಆರೋಪಿಯಾಗಿದ್ದು, ದಾವುದ್ ಮತ್ತು ಶಮೀರ್ ಇಬ್ಬರು ನೇರವಾಗಿ ಫ್ಲ್ಯಾಟ್ ಪ್ರವೇಶಿಸಿ ಇಲ್ಯಾಸ್‌ನನ್ನು ಹತ್ಯೆ ನಡೆಸಿರುವುದು ತನಿಖೆಯಲ್ಲಿ ಬಯಲಾಗಿತ್ತು. ಪ್ರಕರಣ ಸಂಬಂಧ ಜೈಲುಪಾಲಾದ ಶಮೀರ್ ಕೆಲ ದಿನಗಳ ಹಿಂದಷ್ಟೇ ಬಿಡುಗಡೆಗೊಂಡಿದ್ದ.

















































error: Content is protected !!
Scroll to Top