ಕಾರ್ಕಳ : ಕಾರ್ಕಳ – ಹೆಬ್ರಿ ತಾಲೂಕಿನೆಲ್ಲೆಡೆ 78ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಸರಕಾರಿ ಕಚೇರಿಗಳು, ಶಾಲಾ, ಕಾಲೇಜುಗಳು, ಸಂಘ ಸಂಸ್ಥೆಗಳಲ್ಲಿ ಕಾರ್ಯಕ್ರಮಗಳು ಜರುಗಿತು. ಗಾಂಧಿ ಮೈದಾನದಲ್ಲಿ ಕಾರ್ಕಳ ತಾಲೂಕು ಮಟ್ಟದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ನಡೆಯಿತು.
ಕೆದಿಂಜೆಯಲ್ಲಿ ಸ್ವಾತಂತ್ರ್ಯ ಸಂಭ್ರಮ

ಕೆದಿಂಜೆ ಶ್ರೀ ವಿದ್ಯಾ ಬೋಧಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಹಳೆ ವಿದ್ಯಾರ್ಥಿ ಸಂಘ ಕೆದಿಂಜೆ, ಮಕ್ಕಳ ಕ್ಷೇಮಾಭಿವೃದ್ಧಿ ಸಮಿತಿ, ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ಕೆದಿಂಜೆ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಜರಗಿತು. ಕೆದಿಂಜೆ ಶಾಲಾ ಸಂಚಾಲಕ ಯು. ಶೇಷಗಿರಿ ಕಾಮತ್ ದ್ವಜಾರೋಹಣಗೈದರು. ಮಕ್ಕಳ ಕ್ಷೇಮಾಭಿವೃದ್ಧಿ ಸಮಿತಿ ಗೌರವಾಧ್ಯಕ್ಷರಾದ ಎನ್. ತುಕಾರಾಮ ಶೆಟ್ಟಿ ಹಾಗೂ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಅವರು ಶುಭ ಹಾರೈಸಿದರು. ಈ ಸಂಧರ್ಭ ಕೆದಿಂಜೆ ಶಾಲಾ ನಿವೃತ್ತ ಮುಖ್ಯ ಶಿಕ್ಷಕ ಕೆ. ಅನಿಲ್ ಕುಮಾರ್, ಎನ್. ಸುಧಾಕರ್ ರಾವ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೋಳ ಉದಯ ಅಂಚನ್, ಕಾರ್ಯದರ್ಶಿ ಸಂಧ್ಯಾ ಶೆಟ್ಟಿ, ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷ ಬೀರೊಟ್ಟು ದಿನೇಶ್ ಪೂಜಾರಿ, ಕಾರ್ಯದರ್ಶಿ ವೀಣಾ ಪೂಜಾರಿ, ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಸುರೇಶ್ ಕಾಸರಬೈಲು, ಪೂರ್ವಾಧ್ಯಕ್ಷ ಸತೀಶ್ ಪೂಜಾರಿ, ಸುರೇಶ್ ಅಬ್ಬನಡ್ಕ, ಹಳೆ ವಿದ್ಯಾರ್ಥಿ ಸಂಘದ ಸದಸ್ಯರಾದ ಲೀಲಾ ಪೂಜಾರಿ, ರಘು ಪೂಜಾರಿ ಮೊದಲಾದವರಿದ್ದರು. ಕೆದಿಂಜೆ ಶಾಲಾ ಮುಖ್ಯ ಶಿಕ್ಷಕ ಪ್ರಥ್ವೀರಾಜ್ ಬಲ್ಲಾಳ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು, ಸಹ ಶಿಕ್ಷಕಿ ರೇಖಾ ಪೈ ವಂದಿಸಿದರು. ಗೌರವ ಶಿಕ್ಷಕಿಯರಾದ ಮಮತಾ ಜೆ. ಭಾರತಿ ಆಚಾರ್ಯ, ಹರ್ಷಿತಾ, ಆಶಾ ಆಚಾರ್ಯ ಸಹಕರಿಸಿದರು.

ಕಾರ್ಕಳ ಮೈನ್ ಶಾಲೆ

ಕಾರ್ಕಳ ಮೈನ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುರಸಭಾ ಸದಸ್ಯೆ ಸುಮಾ ಕೇಶವ್ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಈ ಸಂದರ್ಭ ಯುವ ನ್ಯಾಯವಾದಿ ವಿಖ್ಯಾತ್ ಜೈನ್, ಸಿ. ಆರ್. ಪಿ ಜ್ಯೋತಿ, ಶಾಲಾ ಎಸ್. ಡಿ. ಎಂ. ಸಿ. ಅಧ್ಯಕ್ಷೆ ಮಾಲಾಶ್ರೀ, ಉಪಾಧ್ಯಕ್ಷ ಪರಸ್ಪರ ಜೋಗಿನ, ಬಾಲಾಜಿ ಜ್ಯುವೆಲ್ಲರಿಯ ಮಾಲಕ ಓಂಕಾರ್, ಶಾಲಾ ಮುಖ್ಯ ಶಿಕ್ಷಕಿ ಶಶಿಕಲಾ, ಶಿಕ್ಷಕಿ ಮಧುಶ್ರೀ, ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು. ಪದವೀಧರ ಸಹ ಶಿಕ್ಷಕಿ ಪ್ರತಿಮಾ ದೇವದಾಸ್ ಸ್ವಾಗತಿಸಿದರು. ಶಿಕ್ಷಕಿಯರಾದ ಅಶ್ವಿನಿ ನಿರೂಪಿಸಿ, ಶ್ರೇಯಾ ವಂದಿಸಿದರು.
ಪರಪು ಗುಂಡ್ಯಡ್ಕ ಅಂಗನವಾಡಿ ಕೇಂದ್ರ


ಲಯನ್ಸ್ ಕ್ಲಬ್ ಕಾರ್ಕಳ ಸಿಟಿ ಸಹಭಾಗಿತ್ವದಲ್ಲಿ ಪರಪು ಗುಂಡ್ಯಡ್ಕ ಅಂಗನವಾಡಿ ಕೇಂದ್ರದಲ್ಲಿ 78ನೇ ವರ್ಷದ ಸ್ವಾತಂತ್ರೋತ್ಸವ ದಿನಾಚರಣೆ ನಡೆಯಿತು. ಸುರೇಶ್ ಕೆ. ಅವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ಲಯನ್ಸ್ ವತಿಯಿಂದ ಅಂಗನವಾಡಿ ಕೇಂದ್ರದ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ, ವಿತರಣೆ ಮಾಡಲಾಯಿತು. ಸ್ವಾತಂತ್ರ್ಯ ದಿನದ ಅಂಗವಾಗಿ ವಿವಿಧ ಆಟೋಟ ಸ್ಪರ್ಧೆ ಆಯೋಜಿಸಿದ್ದು, ವಿಜೇತರಾದ ಪುಟಾಣಿಗಳಿಗೆ ಬಹುಮಾನ ವಿತರಿಸಲಾಯಿತು. ಲಯನ್ಸ್ ಕ್ಲಬ್ ಕಾರ್ಕಳ ಸಿಟಿಯ ಅಧ್ಯಕ್ಷೆ ಜ್ಯೋತಿ ರಮೇಶ್, ವಲಯಾಧ್ಯಕ್ಷ ಶಾಕಿರ್ ಹುಸೇನ್, ಕಾರ್ಯದರ್ಶಿ ರಘುನಾಥ ಕೆ. ಎಸ್., ಪದಾಧಿಕಾರಿಗಳಾದ ನಿತ್ಯಾನಂದ ಪೈ, ಶಾಲಿನಿ, ನಿಹಾಲ್ ಶೆಟ್ಟಿ ಉಪಸ್ಥಿತರಿದ್ದರು.
ಮುದ್ರಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ

ಮುದ್ರಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುದ್ರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ವಸಂತಿ ಪೂಜಾರಿ ಧ್ವಜಾರೋಹಣ ನೆರವೇರಿಸಿದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ರಮ್ಯ ಕಾಂತಿ, ಸದಸ್ಯರಾದ ಸನತ್ ಕುಮಾರ್, ಶಾಂತ ದಿನೇಶ್ ಪೂಜಾರಿ, ಗಣಪತಿ ಎಂ., ಸುಕುಮಾರ್ ಪೂಜಾರಿ ಭಕ್ರೆ, ಎಸ್.ಡಿ.ಎಂ.ಸಿ ಅಧ್ಯಕ್ಷ ಶುಭದರ ಶೆಟ್ಟಿ, ನಿವೃತ್ತ ಶಿಕ್ಷಕ ಗಣಪತಿ ಪೈ ಮುದ್ರಾಡಿ, ಹಳೆವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಸಂತೋಷ ಕುಮಾರ್ ಶೆಟ್ಟಿ ಅನುಗ್ರಹ, ಮುಖ್ಯ ಶಿಕ್ಷಕ ಶ್ರೀನಿವಾಸ ಭಂಡಾರಿ, ಎಸ್.ಡಿ.ಎ.ಸಿ ಸದಸ್ಯರು, ಹಳೆವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ದತ್ತಿನಿಧಿ ಪುರಸ್ಕಾರ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮ ಜರುಗಿತು.
ಕುಕ್ಕುಂದೂರು ಫ್ರೆಂಡ್ಸ್ 78ನೇ ಸ್ವಾತಂತ್ರ್ಯೋತ್ಸವ – ವನಮಹೋತ್ಸವ

ಕುಕ್ಕುಂದೂರು ಫ್ರೆಂಡ್ಸ್ (ರಿ.) ಕುಕ್ಕುಂದೂರು – ಮುಂಬೈ ವತಿಯಿಂದ ಗುರುವಾರ 78ನೇ ಸ್ವಾತಂತ್ರ್ಯೋತ್ಸವ ಆಚರಣೆ ಹಾಗೂ 24 ಗಿಡಗಳನ್ನು ನೆಟ್ಟು ವನಮಹೋತ್ಸವ ನಡೆಯಿತು. ಶ್ರೀ ದುರ್ಗಾದೇವಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕುಕ್ಕುಂದೂರು ಇಲ್ಲಿನ ಶಾಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಧ್ವಜಾರೋಹಣದಲ್ಲಿ ಪಾಲ್ಗೊಂಡು ಮೆರವಣಿಗೆ ನಡೆಸಿ ಬಳಿಕ ಟಪ್ಪಾಲುಕಟ್ಟೆ ಪರಿಸರದಲ್ಲಿ 75ನೇ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ 75ಗಿಡಗಳನ್ನು ನೆಟ್ಟು ನಿರ್ಮಿಸಿದ್ದ ಸ್ವಾತಂತ್ರ್ಯ ಉದ್ಯಾನವನ ಪರಿಸರದಲ್ಲಿ 21 ಗಿಡಗಳನ್ನು ನೆಡಲಾಯಿತು. ಶ್ರೀ ದುರ್ಗಾದೇವಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಸಂಚಾಲಕ ರಾಜೇಂದ್ರ ಕುಮಾರ್ ಬಲ್ಲಾಳ್, ಮುಖ್ಯ ಶಿಕ್ಷಕಿ ಸುಜಾತಾ ಎನ್. ರಾಜ್, ಕುಕ್ಕುಂದೂರು ಫ್ರೆಂಡ್ಸ್ ಗೌರವಾಧ್ಯಕ್ಷ ತ್ರಿವಿಕ್ರಮ ಕಿಣಿ, ಅಧ್ಯಕ್ಷ ಶ್ರೀನಿವಾಸ ಕಿಣಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಜಾರ್ಕಳ ಮುಂಡ್ಲಿ
ಜಾರ್ಕಳ ಮುಂಡ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ರವೀಂದ್ರ ಪೂಜಾರಿ ಧ್ವಜಾರೋಹಣ ನೆರವೇರಿಸಿದರು. ಈ ಸಂಧರ್ಭ ಶಾಲಾಭಿವೃದ್ದಿ ಸಮಿತಿ ಉಪಾಧ್ಯಕ್ಷೆ ನಿರ್ಮಲ ಪ್ರವೀಣ್, ಸಮಿತಿ ಸದಸ್ಯರು, ಹಳೆವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿಗಳು ಮುಂಡ್ಲಿ ಗ್ರಾಮದ ಪ್ರಮುಖ ಸ್ಥಳಗಳ ಮೂಲಕ ಪಥಸಂಚಲನದಲ್ಲಿ ಸಾಗಿ ಬಂದರು. ದಾನಿಗಳು ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಿಸಿದರು.
ಮಾಳ ಶ್ರೀ ಗುರುಕುಲ ಅನುದಾನಿತ ಶಾಲೆ

ಮಾಳ ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಬಾಕಸ್ ಸಂಸ್ಥೆಯ ಗುರುರಾಜ್ ಧ್ವಜಾರೋಹಣ ನೆರವೇರಿಸಿದರು. ಬಳಿಕ ಶಾಲಾ ಸಂಚಾಲಕರಾದ ಸುಧಾಕರ್ ಡೋಂಗ್ರೆ ಅವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ನಂತರ ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆ, ರಾಷ್ಟ್ರ ನಾಯಕರ ಬಗ್ಗೆ ಭಾಷಣ ಮತ್ತು ಚದ್ಮ ವೇಷ ಸ್ಪರ್ಧೆ ನಡೆಯಿತು. ಶಿಕ್ಷಕಿಯರಾದ ಜ್ಯೋತಿ ಸ್ವಾಗತಿಸಿ, ವಸಂತಿ ಕಾರ್ಯಕ್ರಮ ನಿರೂಪಿಸಿದರು. ಪ್ರತಿಕ್ಷ ವಂದಿಸಿದರು.























