ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್‌ಗೆ ರಾಜ್ಯಪಾಲರ ಅನುಮತಿ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ ದೊರೆತಿದೆ. ಅಬ್ರಹಾಂ ಎಂಬವರು ನೀಡಿದ್ದ ಖಾಸಗಿ ದೂರಿನ ಆಧಾರದಲ್ಲಿ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಹಗರಣಗಳ ಸುಳಿಯಲ್ಲಿ ಸಿಲುಕಿ ಒದ್ದಾಡುತ್ತಿರುವ ಸಿದ್ದರಾಮಯ್ಯನವರಿಗೆ ಹಾಗೂ ಕಾಂಗ್ರೆಸ್‌ ಸರಕಾರಕ್ಕೆ ಆಗಿರುವ ದೊಡ್ಡ ಹಿನ್ನಡೆ ಇದು.
ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಕ್ರಮದ ಬಗ್ಗೆ ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದೆ. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಮಂದಿನ ಕಾನೂನು ಹೋರಾಟದ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದಾರೆ.























































































































error: Content is protected !!
Scroll to Top