ಕಾರ್ಕಳ : ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಇಂಟರ್ಯಾಕ್ಟ್ ಕ್ಲಬ್, ಸ್ಕೌಟ್ಸ್ ಆಂಡ್ ಗೈಡ್ಸ್ ಮತ್ತು ಅಟಲ್ ಟಿಂಕರಿಂಗ್ ಲ್ಯಾಬ್ ವತಿಯಿಂದ ಆ. 17 ರಂದು ಕರ್ನಾಟಕದ ಪಕ್ಷಿಗಳು ಮತ್ತು ಪ್ರಕೃತಿ ಸಂರಕ್ಷಣಾ ಕಾರ್ಯಕ್ರಮ ಜರುಗಿತು. ಮಣಿಪಾಲದ ಬರ್ಡಿಂಗ್ ಮತ್ತು ಕನ್ಸರ್ವೇಶನ್ ಟ್ರಸ್ಟ್‌ನ ಟ್ರಸ್ಟಿ ತೇಜಸ್ವಿ ಆಚಾರ್ಯ ವಿವಿದ ಪಕ್ಷಿಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ರೊಟೇರಿಯನ್ ಶಿವಶಂಕರ್, ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಾರ್ವಜನಿಕ ಸಂಪರ್ಕಾಧಿಕಾರಿ ಜ್ಯೋತಿ ಪದ್ಮನಾಭ ಬಂಡಿ, ಜ್ಞಾನಸುಧಾ ಪ್ರೌಢಶಾಲೆಯ ಉಪ ಪ್ರಾಂಶುಪಾಲೆ ವಾಣಿ ಕೆ., ಶಿಕ್ಷಕ ವೃಂದದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ದಿವ್ಯಾ ಕೆ. ಕಾರ್ಯಕ್ರಮ ನಿರ್ವಹಿಸಿದರು.
ಜ್ಞಾನಸುಧಾದಲ್ಲಿ ಪ್ರಕೃತಿ ಸಂರಕ್ಷಣಾ ಕಾರ್ಯಕ್ರಮ































































