ಆ. 21 : ಜ್ಞಾನಸುಧಾ ಸಂಸ್ಥಾಪಕರ ಜನ್ಮದಿನ

ಕಾರ್ಕಳ : ಜ್ಞಾನಸುಧಾ ಸಂಸ್ಥಾಪಕರಾದ ದಿ. ಗೋಪ ಶೆಟ್ಟಿಯವರ ಜನ್ಮದಿನದ ಅಂಗವಾಗಿ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್‌ ವತಿಯಿಂದ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಆ. 21ರಂದು ಸಾಮಾಜಿಕ ನೆರವು ಕಾರ್ಯಕ್ರಮ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 9.30ರಿಂದ ಕೆ.ಎಂ.ಸಿ. ಬ್ಲಡ್ ಸೆಂಟರ್‌ನ ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರ ನಡೆಯಲಿದೆ. ಮಧ್ಯಾಹ್ನ 3.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಕಾರ್ಕಳ ಡಾ.ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯ ಕಣ್ಣಿನ ವಿಭಾಗಕ್ಕೆ 20 ಲಕ್ಷ ರೂ. ಸಹಾಯಧನ, ಮಂಗಳೂರಿನ ಶಕ್ತಿ ಎಜ್ಯುಕೇಶನ್ ಟ್ರಸ್ಟ್‌ಗೆ 1 ಲಕ್ಷ ರೂ. ವಿದ್ಯಾರ್ಥಿ ವೇತನವನ್ನು, ಮಣಿಪಾಲದ ಮೇಘ ಶೆಟ್ಟಿಗಾರ್ ಇವರಿಗೆ ಮನೆ ನಿರ್ಮಾಣದ ಪ್ರಯುಕ್ತ ರೂ. 10 ಸಾವಿರ., ಸ. ಪ್ರೌ. ಶಾಲೆ ತೊರೆಹಡ್ಲುವಿಗೆ ರೂ. 10 ಸಾವಿರ ಆರ್ಥಿಕ ನೆರವು ನೀಡಲಾಗುವುದು.

ಸನ್ಮಾನ
ಇದೇ ಸಂದರ್ಭ ಖ್ಯಾತ ಮುಳುಗು ತಜ್ಞ ಈಶ್ವರ ಮಲ್ಪೆ ಹಾಗೂ ಕಾರ್ಕಳ ಮೆಸ್ಕಾಂನ ಎ ಮತ್ತು ಬಿ ವಿಭಾಗದ ಪವರ್ ಮ್ಯಾನ್‌ಗಳನ್ನು ಸನ್ಮಾನಿಸಲಾಗುವುದು.
ರಕ್ತದಾನ ಶಿಬಿರವನ್ನು ಕೆ. ಎಂ. ಸಿ. ಬ್ಲಡ್ ಸೆಂಟರ್‌ನ ನಿರ್ದೇಶಕ ಡಾ.ಶಮಿ ಶಾಸ್ತ್ರೀ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರಿನ ಶಾರದಾ ವಿದ್ಯಾಲಯಗಳ ಅಧ್ಯಕ್ಷ ಪ್ರೊ. ಎಂ. ಬಿ. ಪುರಾಣಿಕ್‌ ವಹಿಸಲಿದ್ದಾರೆ. ಡಾ.ಟಿ.ಎಂ.ಎ ಪೈ ರೋಟರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಕೀರ್ತಿನಾಥ ಬಲ್ಲಾಳ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಎ.ಪಿ.ಜಿ.ಇ.ಟಿ ಪ್ರಕಟಣೆ ತಿಳಿಸಿದೆ.





























































































































error: Content is protected !!
Scroll to Top