ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಉಡುಪಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಕಾರ್ಕಳ ತಾಲೂಕು ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಅರ್ಹ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. https://karnemakaone.kar.nic.in/abcd/ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಕಾರ್ಕಳ ತಾಲೂಕಿನಲ್ಲಿ 7 ಅಂಗನವಾಡಿ ಕಾರ್ಯಕರ್ತೆ ಹಾಗೂ 23 ಅಂಗನವಾಡಿ ಸಹಾಯಕಿಯರು ಮತ್ತು ಹುದ್ದೆಗಳು ಖಾಲಿ ಇರುತ್ತವೆ. ಅರ್ಜಿ ಸಲ್ಲಿಸಲು ಸೆ.19 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.















































\















error: Content is protected !!
Scroll to Top