ಕ್ರೈಸ್ಟ್‌ಕಿಂಗ್‌ನಲ್ಲಿ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ

ಕಾರ್ಕಳ : ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ಆ. 21ರಂದು ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಬೆಳ್ಮಣ್ ಸ. ಪ. ಪೂ. ಕಾಲೇಜಿನ ಉಪನ್ಯಾಸಕಿ, ಯೋಗ ತರಬೇತುದಾರೆ ಮಾಲತಿ ಪೈ ಮಾತನಾಡಿ, ಉತ್ತಮ ವ್ಯಕ್ತಿತ್ವ ರೂಪಿಸುವಲ್ಲಿ ಯೋಗದ ಪಾತ್ರವು ಮಹತ್ತರ. ವಿದ್ಯಾರ್ಥಿಗಳು ಯೋಹ ಅಭ್ಯಾಸ ಮಾಡುವುದರಿಂದ ಮಾನಸಿಕ ಸಮತೋಲನವನ್ನು ಕಾಯ್ದುಕೊಳ್ಳಬಹುದು. ತನ್ಮೂಲಕ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬಹುದು ಎಂದರು. ಪ್ರೌಢಶಾಲಾ ಮುಖ್ಯ ಶಿಕ್ಷಕ ಡೊಮಿನಿಕ್ ಅಂದ್ರಾದೆ, ಪದವಿ ಪೂರ್ವ ವಿಭಾಗದ ಹಿಂದಿ ಉಪನ್ಯಾಸಕಿ ಶಾಹಿನಾ ಬಾನು ಹಾಗೂ ಸಂಸ್ಥೆಯ ಆಡಳಿತಾಧಿಕಾರಿ ವಿನಯ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರೌಢಶಾಲಾ ವಿಭಾಗದ ಹಿಂದಿ ಶಿಕ್ಷಕಿ ಶಮೀನಾ ಬಾನು ಸ್ವಾಗತಿಸಿದರು. ವಿದ್ಯಾರ್ಥಿಗಳಾದ ಶಾನ್ವಿ ಕಾರ್ಯಕ್ರಮ ನಿರೂಪಿಸಿ, ಲೆನಿಶ ವಂದಿಸಿದರು.





























































































































error: Content is protected !!
Scroll to Top