ನಿಟ್ಟೆ : ನಿಟ್ಟೆಯಲ್ಲಿ ಬುಧವಾರ ಕಾಲೇಜು ವಿದ್ಯಾರ್ಥಿ ಬಸ್‌ನಿಂದ ಬಿದ್ದು ಮೃತಪಟ್ಟಿರುವ ಘಟನೆಯ ಹಿನ್ನೆಲೆಯಲ್ಲಿ ಖಾಸಗಿ ಬಸ್‌ಗಳ ಮತ್ತು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ (ಆರ್‌ಟಿಒ) ನಿರ್ಲಕ್ಷ್ಯ ಧೋರಣೆ ಖಂಡಿಸಲು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಇಂದು ನಿಟ್ಟೆಯಲ್ಲಿ ಪ್ರತಿಭಟನೆ ನಡೆಸಲಿದೆ.
ಬೆಳಗ್ಗೆ ಮತ್ತು ಸಂಜೆ ಹೊತ್ತು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹೆಚ್ಚುವರಿ ಸರಕಾರಿ ಬಸ್‌ಗಳನ್ನು ಓಡಿಸಬೇಕು, ವಿದ್ಯಾರ್ಥಿಗಳ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಎಬಿವಿಪಿ ಬೆಳಗ್ಗೆ 8 ಗಂಟೆಯಿಂದ ನಿಟ್ಟೆ ಬಸ್ ತಂಗುದಾಣದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಿದೆ. ವಿದ್ಯಾರ್ಥಿಗಳು ಈ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಪ್ರಕಟಣೆಯಲ್ಲಿ ವಿನಂತಿಸಲಾಗಿದೆ.
ವಿದ್ಯಾರ್ಥಿ ಸಾವು : ನಿಟ್ಟೆಯಲ್ಲಿ ಇಂದು ಎಬಿವಿಪಿ ಪ್ರತಿಭಟನೆ






























































