ಐವನ್ ಡಿ’ಸೋಜಾ ಮನೆಗೆ ಕಲ್ಲು ತೂರಾಟ

ಮಂಗಳೂರು: ರಾಜ್ಯಪಾಲರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಕಾಂಗ್ರೆಸ್‌ ವಿಧಾನ ಪರಿಷತ್‌ ಸದಸ್ಯ ಐವನ್ ಡಿಸೋಜಾ ಅವರ ಮಂಗಳೂರಿನಲ್ಲಿರುವ ಮನೆಗೆ ಕಿಡಿಗೇಡಿಗಳು ನಿನ್ನೆ ರಾತ್ರಿ ಕಲ್ಲುತೂರಾಟ ಮಾಡಿದ್ದಾರೆ.
ಮಂಗಳೂರಿನ ವೆಲೆನ್ಸಿಯಾದಲ್ಲಿರುವ ಐವನ್ ಡಿಸೋಜಾ ಅವರ ಮನೆ ಮೇಲೆ ಬೈಕ್‌ನಲ್ಲಿ ಬಂದ ಇಬ್ಬರು ಕಲ್ಲೆಸೆದು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಐವನ್ ಡಿಸೋಜಾ ಅವರು ಇತ್ತೀಚೆಗೆ ಪ್ರತಿಭಟನೆಯಲ್ಲಿ ಬಾಂಗ್ಲಾದೇಶದ ಮಾದರಿಯಲ್ಲಿ ಕರ್ನಾಟಕದ ರಾಜ್ಯಪಾಲರನ್ನು ಮನೆಗೆ ನುಗ್ಗಿ ಓಡಿಸುತ್ತೇವೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಗೆಹ್ಲೋಟ್ ಅವರಂತಹ ಕುತಂತ್ರಿ ದೇಶದಲ್ಲಿ ಬೇರೆ ಯಾರೂ ಇಲ್ಲ. ರಾಷ್ಟ್ರಪತಿಗಳು ಕೂಡಲೇ ಅವರನ್ನು ವಾಪಸ್ ಕರೆಸಿಕೊಳ್ಳಬೇಕು. ಇಲ್ಲದಿದ್ದರೆ ಬಾಂಗ್ಲಾದೇಶದ ಪ್ರಧಾನಮಂತ್ರಿಗಳಿಗೆ ಬಂದ ಪರಿಸ್ಥಿತಿಯೇ ಇವರಿಗೂ ಬರಲಿದೆ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಐವನ್‌ ಡಿಸೋಜ ವಿರುದ್ಧ ರಾಜ್ಯದ ಹಲವೆಡೆ ಕೇಸ್‌ಗಳು ದಾಖಲಾಗಿವೆ.





























































































































error: Content is protected !!
Scroll to Top