ಕ್ರೈಸ್ಟ್‌ಕಿಂಗ್‌ : ಮೊಬೈಲ್, ಸೈಬರ್ ಕ್ರೈಮ್‌ ಮತ್ತು ಮಾದಕ ದ್ರವ್ಯಗಳ ಕುರಿತು ಜಾಗೃತಿ ಕಾರ್ಯಕ್ರಮ

ಕಾರ್ಕಳ : ಕ್ರೈಸ್ಟ್‌ಕಿಂಗ್‌ ಶಿಕ್ಷಣ ಸಂಸ್ಥೆಗಳಲ್ಲಿ ರೋಟರಿ ಕ್ಲಬ್ ಕಾರ್ಕಳ, ಕ್ರೈಸ್ಟ್‌ಕಿಂಗ್‌ ಇಂಟರ‍್ಯಾಕ್ಟ್ ಕ್ಲಬ್ ಇವರ ಸಂಯುಕ್ತ ಆಶ್ರಯದಲ್ಲಿ ಮೊಬೈಲ್, ಸೈಬರ್ ಕ್ರೈಮ್‌ ಮತ್ತು ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಕಾರ್ಯಕ್ರಮ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಉಡುಪಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಕಚೇರಿಯ ಸಂತೋಷ್ ಮಾತನಾಡಿ, ಮಾದಕ ದ್ರವ್ಯ ಸೇವನೆ ದೇಶದ ಮುಂದಿರುವ ಬಹುದೊಡ್ಡ ಸವಾಲುಗಳಲ್ಲಿ ಒಂದಾಗಿದೆ. ಪೋಷಕರೊಂದಿಗೆ ಶಿಕ್ಷಕರು ಮಕ್ಕಳ ವರ್ತನೆಯ ಬಗ್ಗೆ ತೀವ್ರ ಗಮನ ಹರಿಸಬೇಕು. ಮಾದಕ ದ್ರವ್ಯ, ಸೈಬರ್ ಹಾಗೂ ಅಪ್ರಾಪ್ತರರಿಗೆ ಸಂಬಂಧಿಸಿದ ವಿಷಯಗಳಲ್ಲಿ ಕಾನೂನು ಕಟ್ಟುನಿಟ್ಟಾಗಿದ್ದು ಮಕ್ಕಳು ಕಾನೂನಿನ ಅರಿವಿನಲ್ಲಿ ಬದುಕಬೇಕು ಎಂದು ಹೇಳಿದರು.

ರೋಟರಿ ಕ್ಲಬ್ ಅಧ್ಯಕ್ಷ ಇಕ್ಬಾಲ್ ಅಹಮದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಗಣೇಶ್ ಸಾಲ್ಯಾನ್, ಕ್ರೈಸ್ಟ್‌ಕಿಂಗ್‌ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಲಕ್ಷ್ಮೀನಾರಾಯಣ ಕಾಮತ್, ಉಪ ಪ್ರಾಚಾರ್ಯ ಡಾ. ಪ್ರಕಾಶ್ ಭಟ್, ಪ್ರೌಢಶಾಲಾ ಮುಖ್ಯ ಶಿಕ್ಷಕ ಡೊಮಿನಿಕ್ ಅಂದ್ರಾದೆ, ಸಂಸ್ಥೆಯ ಇಂಟರ‍್ಯಾಕ್ಟ್ ಅಧ್ಯಕ್ಷ 9ನೇ ತರಗತಿಯ ಅನುಷ್ ಡಿ. ಶೆಟ್ಟಿ, ಕಾರ್ಯದರ್ಶಿ ವಿಶೋನ್ ಶೆಲ್ಟನ್ ಸಲ್ಡಾನ್ಹ ವೇದಿಕೆಯಲ್ಲಿದ್ದರು. ಕಾರ್ಯಕ್ರಮದಲ್ಲಿ ಕಾರ್ಕಳ ರೋಟರಿ ಕ್ಲಬ್‌ನ ಸದಸ್ಯರು ಉಪಸ್ಥಿತರಿದ್ದರು. ಸಂಸ್ಥೆಯ ಪ್ರೌಢಶಾಲಾ ವಿಭಾಗದ ಶಿಕ್ಷಕಿ ಆಶಾ ಜ್ಯೋತಿ ಕಾರ್ಯಕ್ರಮ ನಿರ್ವಹಿಸಿದರು.



















































error: Content is protected !!
Scroll to Top