ಕಾರ್ಕಳ : ಮಾಳ ಗ್ರಾಮ ಪಂಚಾಯತ್ ವತಿಯಿಂದ ಮಾಳ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುಮಾರು 2.25 ಲಕ್ಷ ರೂ. ಮೌಲ್ಯದ CBC Analyser ರಕ್ತಪರೀಕ್ಷೆ ಉಪಕರಣವನ್ನು ಆ. 27ರಂದು ಹಸ್ತಾಂತರಿಸಲಾಯಿತು. ಮಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ರಜತ ಮಹೋತ್ಸವ ಹಿನ್ನೆಲೆಯಲ್ಲಿ ಪಂಚಾಯತ್‌ನ ವಿಶೇಷ ಅನುದಾನದಲ್ಲಿ ಒದಗಿಸಿದ ಈ ಉಪಕರಣವನ್ನು ಪಂಚಾಯತ್ ಅಧ್ಯಕ್ಷ ಉಮೇಶ್ ಪೂಜಾರಿ ಅವರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ದಿಶಾ ಕಿಶನ್ ಅವರಿಗೆ ಹಸ್ತಾಂತರಿಸಿದರು. ಈ ವೇಳೆ ಮಾತನಾಡಿದ ಉಮೇಶ್ ಪೂಜಾರಿ ಅವರು ಮಾಳ, ಶಿರ್ಲಾಲು, ಕೆರ್ವಾಶೆ ಮತ್ತು ಮುಂಡ್ಲಿ ಗ್ರಾಮದ ಗ್ರಾಮಸ್ಥರ ಅನುಕೂಲಕ್ಕಾಗಿ ರಕ್ತಪರೀಕ್ಷೆ ಉಪಕರಣವನ್ನು ಆರೋಗ್ಯ ಕೇಂದ್ರಕ್ಕೆ ನೀಡಲಾಗಿದೆ ಎಂದರು.
ತಾಲೂಕು ಆರೋಗ್ಯಾಧಿಕಾರಿ ಡಾ. ಸಂದೀಪ್ ಕುಡ್ವ , ಶಿರ್ಲಾಲು ಪಂಚಾಯತ್ ಅಧ್ಯಕ್ಷೆ ಭಾರತಿ ದೇವಾಡಿಗ, ಪಂಚಾಯತ್ ಉಪಾಧ್ಯಕ್ಷೆ ವಿಮಲಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್, ಪ್ರಾಥಮಿಕ ಆರೋಗ್ಯದ ಕೇಂದ್ರದ ರಜತ ಮಹೋತ್ಸವ ಸಮಿತಿ ಅಧ್ಯಕ್ಷ, ಗ್ರಾ.ಪಂ. ಅಧ್ಯಕ್ಷ ಅಜಿತ್ ಹೆಗ್ಡೆ, ಸಂತೋಷ್ ಪೂಜಾರಿ, ಅಶೋಕ್ ಬರ್ವೇ, ಅಜಿತ್ ಹೆಗ್ಡೆ, ನೀಲು, ಅನಿಲ್ ಎಸ್. ಪೂಜಾರಿ, ರಘುರಾಮ್ ಶೆಟ್ಟಿ, ದಿನೇಶ್ ಶೆಟ್ಟಿ ಹಾಗೂ ರಮಾನಂದ ಪೂಜಾರಿ, ಸದಾನಂದ ಸಾಲಿಯಾನ್, ಪಂಚಾಯತ್ ಸದಸ್ಯರು, ಗ್ರಾಮಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.






























