ಬೈಕ್‌ಗೆ ಕಾರು ಡಿಕ್ಕಿ – ಸವಾರನಿಗೆ ಗಾಯ

ಕಾರ್ಕಳ : ಬೈಕ್‌ಗೆ ಕಾರು ಡಿಕ್ಕಿಯಾಗಿ ಸವಾರ ಗಾಯಗೊಂಡಿರುವ ಘಟನೆ ಆ. 27ರಂದು ಯರ್ಲಪಾಡಿ ಗ್ರಾಮದ ಗೋವಿಂದೂರಿನಲ್ಲಿ ಸಂಭವಿಸಿದೆ. ಗೋವಿಂದೂರಿನ ಸಂತೋಷ ಎಂಬವರು ಯರ್ಲಪಾಡಿ ಕಡೆಯಿಂದ ಬೈಲೂರು ಕಡೆಗೆ ಬೈಕ್‌ನಲ್ಲಿ ಹೋಗುತ್ತಿರುವಾಗ ಅನಂತಮತಿ ಶಾಲೆಯ ಬಳಿ ತಲುಪುವಾಗ ಎದುರಿನಲ್ಲಿ ಹರಿಶ್ಚಂದ್ರ ಚಲಾಯಿಸಿಕೊಂಡು ಹೋಗುತ್ತಿದ್ದ ಕಾರನ್ನು ಯಾವುದೇ ಸೂಚನೆ ನೀಡದೆ ಬಲಕ್ಕೆ ತಿರುಗಿಸಿದ್ದಾರೆ. ಪರಿಣಾಮವಾಗಿ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಸಂತೋಷ್‌ ಗಾಯಗೊಂಡಿರುತ್ತಾರೆ. ಅವರನ್ನು ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ನಂತರ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.































































error: Content is protected !!
Scroll to Top